• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ

|

ಮುಂಬೈ, ಮಾರ್ಚ್ 23: ಭಾರತದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ 68 ವರ್ಷದ ವ್ಯಕ್ತಿ ಕೊರೊನಾ ವೈರಸ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ, ಪಂಜಾಬ್, ದೆಹಲಿ, ಕರ್ನಾಟಕ, ಬಿಹಾರ ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ಈಗ ವಿಶ್ವಾದ್ಯಂತ ಹರಡುತ್ತಿದೆ. 14,300ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದು, ಭಾರತ ಸೇರಿ ಒಟ್ಟು 150ರಾಷ್ಟ್ರಗಳಿಗೂ ಹೆಚ್ಚು ಕಡೆ ವೈರಸ್ ಹರಡಿದೆ. ಕರ್ನಾಟಕಕ್ಕೂ ಕೊರೊನಾ ವೈರಸ್ ಕಾಲಿಟ್ಟಿದೆ. ದೇಶದಲ್ಲಿ7 ಸಾವಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 390 ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಕೇಂದ್ರ ಸರಕಾರವು ಕೇವಲ 75 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡಲು ಸೂಚಿಸಿದ್ದರೂ 12 ರಾಜ್ಯಗಳು ಸ್ವಯಂಪ್ರೇರಣೆಯಿಂದ ಸಂಪೂರ್ಣ ರಾಜ್ಯಕ್ಕೇ ಲಾಕ್‌ಡೌನ್‌ ಘೋಷಿಸಿವೆ.

ಆದರೆ, ದೇಶದಲ್ಲೇ ಮೊದಲ ಬಾರಿ ಕೊರೊನಾ ಸಾವು ಸಂಭವಿಸಿದ ಕರ್ನಾಟಕ ಮಾತ್ರ ಕೇಂದ್ರ ಹೇಳಿದ ಜಿಲ್ಲೆಗಳಿಗೆ ಲಾಕ್‌ಡೌನ್‌ ಸೀಮಿತಗೊಳಿಸಿದೆ. ಇದು ಮಹಾಮಾರಿಯನ್ನು ಎದುರಿಸಲು ರಾಜ್ಯ ಸಮಗ್ರ ಸಿದ್ಧತೆ ನಡೆಸಿಲ್ಲ ಎನ್ನುವುದನ್ನು ಸೂಚಿಸುತ್ತದೆ.

English summary
Coronavirus Death Toll Rises In India by 8. In Mumbai 68 year Old men Died Due To Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X