ಮಾರ್ಚ್ 31ರವರೆಗೆ ದೆಹಲಿ, ಪಂಜಾಬ್, ತೆಲಂಗಾಣ ಲಾಕ್‌ಡೌನ್
ನವದೆಹಲಿ, ಮಾರ್ಚ್ 23: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ 390ಕ್ಕೇರಿದೆ.
ಈ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿಯನ್ನು ಮಾರ್ಚ್ 31ರವರೆಗೆ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಹಾಗೆಯೇ ಪಂಜಾಬ್, ತೆಲಂಗಾಣ ಸರ್ಕಾರಗಳು ಕೂಡ ಇದೇ ಮಾದರಿಯ ಕ್ರಮವನ್ನು ಕೈಗೆತ್ತಿಕೊಂಡಿದೆ. ಕೊರೊನಾವೈರಸ್ ನಿಂದಾಗಿ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ನವದೆಹಲಿ, ಪಂಜಾಬ್, ರಾಜಸ್ಥಾನ, ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ, ಮಾಲ್ ಗಳು, ಶಾಪ್ ಗಳನ್ನು ಈ ಮಾಸಾಂತ್ಯದವರೆಗೂ ಸ್ಥಗಿತಗೊಳಿಸಲಾಗಿದ್ದು, ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

ಕೇರಳ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶಾದ್ಯಂತ 390 ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ.
ಅಂತಾರಾಜ್ಯ ಮಾರ್ಚ್ ಸೇವೆ ಸೇರಿದಂತೆ ಅಗತ್ಯಯೇತರ ಸೇವೆಗಳ ಮೇಲೂ ಮಾರ್ಚ್ 31ರವರೆಗೂ ನಿರ್ಭಂಧ ಹೇರಲಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ, ಬೆಂಗಳೂರು ಸೇರಿದಂತೆ ಮತ್ತಿತರ ಪ್ರಮುಖ ನಗರಗಳಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಮೆಟ್ರೋ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.












Click it and Unblock the Notifications