ಸರ್ಕಾರಿ ಆಸ್ಪತ್ರೆಗಳಿಗೆ 36,433 ವೆಂಟಿಲೇಟರ್‌ ಪೂರೈಕೆ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ, ಡಿಸೆಂಬರ್ 31: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಜೊತೆಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ದೇಶದ ಸರ್ಕಾರಿ ಆಸ್ಪತ್ರೆಗಳಿಗೆ 36,433 ವೆಂಟಿಲೇಟರ್‌ಗಳನ್ನು ತಲುಪಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಈ ವೆಂಟಿಲೇಟರ್‌ಗಳ ದೇಶಿಯ ಉದ್ಯಮಗಳಲ್ಲಿನ ತಯಾರಿಕೆಯಿಂದಾಗಿ ಈಗ ಸರಾಸರಿ ವೆಚ್ಚವು 2-10 ಲಕ್ಷ ರೂ. ತಲುಪಿದೆ ಎನ್ನಲಾಗಿದೆ. ಕೋವಿಡ್ ಪೂರ್ವದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 16,000 ವೆಂಟಿಲೇಟರ್‌ಗಳನ್ನು ಮಾತ್ರ ಹೊಂದಿವೆ ಎಂದು ಸಚಿವಾಲಯವು ತಿಳಿಸಿದೆ.

ಆದರೆ 12 ತಿಂಗಳೊಳಗೆ 36,433 'ಮೇಕ್ ಇನ್ ಇಂಡಿಯಾ' ವೆಂಟಿಲೇಟರ್‌ಗಳನ್ನು ಎಲ್ಲಾ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಿಗೆ ಸರಬರಾಜು ಮಾಡಲಾಗಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.

Coronavirus Fear: 36,433 Ventilators Delivered To Govt Hospitals

ಜೊತೆಗೆ ವೆಂಟಿಲೇಟರ್‌ಗಳ ಮೇಲಿನ ಎಲ್ಲಾ ರಫ್ತು ನಿರ್ಬಂಧಗಳನ್ನು ಈಗ ತೆಗೆದುಹಾಕಲಾಗಿದೆ ಮತ್ತು 'ಮೇಕ್ ಇನ್ ಇಂಡಿಯಾ' ವೆಂಟಿಲೇಟರ್‌ಗಳನ್ನು ರಫ್ತು ಮಾಡಲಾಗುತ್ತಿದೆ. ಈ ವರ್ಷ ದೇಶದ ವೈದ್ಯಕೀಯ ಸರಬರಾಜು ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ವಿಷಯದಲ್ಲಿ ಭಾರತವು ಇದೀಗ ವಿಶ್ವದಲ್ಲೇ ಎರಡನೇ ಅತಿದೊಡ್ಡ ಉತ್ಪಾದಕವಾಗಿದೆ. ದಿನಕ್ಕೆ 10 ಲಕ್ಷಕ್ಕೂ ಹೆಚ್ಚು ಪಿಪಿಇ ಕಿಟ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಇದನ್ನು ಹಲವಾರು ದೇಶಗಳಿಗೆ ರಫ್ತು ಮಾಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+