Breaking: ಭಾರತದಲ್ಲಿ ಒಂದೇ ದಿನ 13,734 ಮಂದಿಗೆ ಕೊರೊನಾ ವೈರಸ್!

ನವದೆಹಲಿ, ಆಗಸ್ಟ್ 2: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಬಗ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇತ್ತೀಚಿನ ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯು ಇಳಿಮುಖ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ 13 ಸಾವಿರದ ಆಸುಪಾಸಿಗೆ ಇಳಿದಿದೆೆ.

ದೇಶದಲ್ಲಿ ಕಳೆದೊಂದು ದಿನದಲ್ಲಿ 13734 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆದರೆ ಇದೇ ಅವಧಿಯಲ್ಲಿ 17,897 ಸೋಂಕಿತರು ಗುಣಮುಖರಾಗಿದ್ದರೆ, 39 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಭಾರತದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,050,009ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,383,787 ಸೋಂಕಿತರು ಗುಣಮುಖರಾಗಿದ್ದು, 526,430 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 139,792ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Coronavirus In india; 13734 New Cases Reported in Last 24 Hours

ಕೊರೊನಾ ವೈರಸ್ ಪರೀಕ್ಷೆ: ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲೂ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 4,11,102 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,58,92,611 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Recommended Video

      ಕೈಕೊಟ್ಟ Dinesh Karthik, ಎಡವಟ್ಟು ಮಾಡಿದ ಆವೇಶ್ ಖಾನ್!ವೆಸ್ಟ್ ಇಂಡೀಸ್ ಗೆ ಸುಲಭ ಜಯ | *Cricket | OneIndia

      ಕೋವಿಡ್-19 ಲಸಿಕೆ ವಿತರಣೆ ಮಾಹಿತಿ: ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 26,77,405 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 204,60,81,081 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+