Breaking: ಭಾರತದಲ್ಲಿ ಇಳಿಕೆಯಾದ ಕೊರೊನಾ ವೈರಸ್ ಪ್ರಕರಣ

ನವದೆಹಲಿ, ಆಗಸ್ಟ್ 1: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿನಿತ್ಯ 20 ಸಾವಿರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಸೋಮವಾರ 16 ಸಾವಿರಕ್ಕೆ ತಗ್ಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16464 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ 39 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,112 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,036,275ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,365,890 ಸೋಂಕಿತರು ಗುಣಮುಖರಾಗಿದ್ದು, 526,396 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,989ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Coronavirus In india; 16464 New Cases Reported in Last 24 Hours

ಕೊರೊನಾ ವೈರಸ್ ಪರೀಕ್ಷೆ: ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲೂ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,96,424 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,52,07,621 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Recommended Video

      ಫಾಝಿಲ್ ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಚೇಸ್ ಮಾಡಿ ಅರೆಸ್ಟ್ ಮಾಡಿದ್ದು ಹೇಗೆ? | *Crime |Oneindia Kannada

      ಕೋವಿಡ್-19 ಲಸಿಕೆ ವಿತರಣೆ ಮಾಹಿತಿ: ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 8,34,167 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 204,34,03,676 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+