Breaking: ಭಾರತದಲ್ಲಿ ಮತ್ತೆ 19,459 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಜೂನ್ 29: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 19,459 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 308 ಮಂದಿ ಸಾವನ್ನಪ್ಪಿದ್ದಾರೆ.
ಇದುವರೆಗೆ ಒಟ್ಟು 16,475 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ, ಒಟ್ಟು ಸೋಂಕಿತರ ಸಂಖ್ಯೆ 5,48,318 ಲಕ್ಷ ತಲುಪಿದೆ.

2,10,120 ಪ್ರಕರಣಗಳು ಸಕ್ರಿಯವಾಗಿವೆ. 3,21,723 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಭಾನುವಾರವೂ ಕೂಡ ಭಾರತದಲ್ಲಿ 19,906 ಮಂದಿ ಸೋಂಕಿತರು ಪತ್ತೆಯಾಗಿದ್ದರು.
410 ಮಂದಿ ಮೃತಪಟ್ಟಿದ್ದರು. ಅಮೆರಿಕ, ಬ್ರೆಜಿಲ್, ರಷ್ಯಾ ಟಾಪ್ 3 ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಭಾನುವಾರ ಒಟ್ಟು 1267 ಪ್ರಕರಣಗಳು ಪತ್ತೆಯಾಗಿವೆ.
ಕೊರೊನಾ ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 207 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 783 ಪ್ರಕರಣಗಳು ಪತ್ತೆಯಾಗಿವೆ.
ಒಟ್ಟು 3313 ಮಂದಿ ಕೊರೊನಾ ಸೋಂಕಿತರಿದ್ದಾರೆ. ಒಟ್ಟು 533 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಐದು ದಿನಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದುಪ್ಪಟ್ಟಾಗಿವೆ.ಜೂನ್ 23 ರಂದು 1556 ಕೊರೊನಾ ಪ್ರಕರಣ ದಾಖಲಾಗಿತ್ತು.
ಜೂನ್ 28 ರಂದು 3419 ಕೊರೊನಾ ಸೋಂಕಿತ ಪ್ರಕರಣ ದಾಖಲಾಗಿದೆ, ಕರ್ನಾಟಕದ ಒಟ್ಟು ಪ್ರಕರಣಗಳಲ್ಲಿ ಶೇ.25.92ರಷ್ಟು ಬೆಂಗಳೂರಿನಲ್ಲಿವೆ, ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.












Click it and Unblock the Notifications