ಕೊರೊನಾ ವೈರಸ್ ಗೆ ಲಸಿಕೆ: ಬಾಬಾ ರಾಮದೇವ್ ಮಹತ್ವದ ಹೇಳಿಕೆ
ನವದೆಹಲಿ, ಮಾರ್ಚ್ 19: ಮಾರಣಾಂತಿಕ ಕೊರೊನಾ ತನ್ನ ಆರ್ಭಟವನ್ನು ಮುಂದುವರಿಸುತ್ತಿರುವ ಈ ಹೊತ್ತಿನಲ್ಲಿ ಹರಿದ್ವಾರದ ಪತಂಜಲಿ ಯೋಗಪೀಠದ ಬಾಬಾ ರಾಮದೇವ್ ನೀಡಿರುವ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.
ಈ ವೈರಸ್ ಗೆ ವಿಶ್ವದಾದ್ಯಂತ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ವೈದ್ಯರು ಇದಕ್ಕೆ ಲಸಿಕೆಯನ್ನು ಕಂಡುಕೊಳ್ಳಲು ಹರಸಾಹಸ ಪಡುತ್ತಿರುವಾಗ, ರಾಮದೇವ್, ಇದಕ್ಕೆ ಆಯುರ್ವೇದದಲ್ಲಿ ಮದ್ದಿದೆ ಎಂದು ಹೇಳಿರುವುದು ಭಾರೀ ಚರ್ಚೆಗೆ ಗುರಿಯಾಗಿದೆ.
ತಮ್ಮ ಸಂಸ್ಥೆಯ ಅಶ್ವಗಂಧ ಉತ್ಪನ್ನದ ಜಾಹೀರಾತಿನಲ್ಲಿ ಬಾಬಾ ರಾಮದೇವ್, ಕೊರೊನಾ ವೈರಸ್ ಸೇರಿದಂತೆ, ಮಾರಾಣಾಂತಿಕ ಕಾಯಿಲೆಗಳಿಗೆ ಆಯುರ್ವೇದದಲ್ಲಿ ಮದ್ದಿದೆ ಎಂದು ಹೇಳಿದ್ದಾರೆ.

"ವೈಜ್ಞಾನಿಕ ಸಂಶೋಧನೆಯಲ್ಲಿ ಕೊರೊನಾ ವೈರಸ್ ಗೆ ಅಶ್ವಗಂಧ ಮದ್ದು ಎನ್ನುವುದು ಸಾಬೀತಾಗಿದೆ. ಅಶ್ವಗಂಧ, ಮಾನವನ ಪ್ರೊಟೀನ್ ಮತ್ತು ಕೊರೊನಾ ಪ್ರೊಟೀನ್ ಸಮ್ಮಿಲನಗೊಳ್ಳದಂತೆ ನೋಡಿಕೊಳ್ಳುತ್ತದೆ" ಎಂದು ಬಾಬಾ ರಾಮದೇವ್ ಹೇಳಿದ್ದಾರೆ.
"ಮೊದಲು ಜನರು ತಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕೆ ಯೋಗವೇ ಸೂಕ್ತವಾದ ದಾರಿ, ಎಲ್ಲರೂ ಯೋಗವನ್ನು ಮಾಡಿ" ಎನ್ನುವ ಸಲಹೆಯನ್ನು ರಾಮದೇವ್ ನೀಡಿದ್ದಾರೆ.
Treat yourself naturally with Patanjali Health Drinks that provides you essential minerals & nutrition. These are healthful combination providing great medicinal benefits which strengthens your immune system & act as a natural defender against diseases.#Patanjali #covidindia pic.twitter.com/8LlwbVZh5g
— Patanjali Ayurved (@PypAyurved) March 17, 2020
"ಪತಂಜಲಿ ಸಂಸ್ಥೆಯ ಉತ್ಪನ್ನಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಆದರೆ, ಕೊರೊನಾ ಸೋಂಕು ನಿಗ್ರಹ ಇದರಿಂದ ಸಾಧ್ಯವೇ ಎನ್ನುವುದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಪತಂಜಲಿಯ ಈ ಜಾಹೀರಾತು ಉತ್ತಮ ಬೆಳವಣಿಗೆಯಲ್ಲ" ಎಂದು ಕೇಂದ್ರ ಆಯುಶ್ ಇಲಾಖೆಯ ಅಧಿಕಾರಿ ಮನೋಜ್ ನೇಸರಿ ಬೇಸರ ವ್ಯಕ್ತ ಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications