Breaking: ಭಾರತದಲ್ಲಿ 'Down' ಆಯ್ತು ಕೊರೊನಾ ವೈರಸ್ ಹಾವಳಿ!
ನವದೆಹಲಿ, ಜುಲೈ 25: ಭಾರತದಲ್ಲಿ 20 ಸಾವಿರದ ಗಡಿ ದಾಟುತ್ತಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಜುಲೈ ಮತ್ತು ಆಗಸ್ಟ್ ವೇಳೆಗೆ ಕೋವಿಡ್-19 ಅಪಾಯ ಹೆಚ್ಚಾಗುವುದು ಎಂದ ತಜ್ಞರ ಎಚ್ಚರಿಕೆ ಬಗ್ಗೆ ಅನುಮಾನ ಹುಟ್ಟುತ್ತಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14830 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,159 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,920,451ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,228,670 ಸೋಂಕಿತರು ಗುಣಮುಖರಾಗಿದ್ದು, 526,110 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 165,671ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ.3.48ರಷ್ಟಿದೆ:
ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 4,26,102 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,31,85,917 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 3.48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಕೋವಿಡ್-19 ಲಸಿಕೆ ವಿತರಣೆ:
ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 30,42,476 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 202,50,57,717 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications