Breaking: ಭಾರತದಲ್ಲಿ ಒಂದೇ ದಿನ 20409 ಮಂದಿಗೆ ಕೊರೊನಾ ವೈರಸ್!

ನವದೆಹಲಿ, ಜುಲೈ 29: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಒಂದು ದಿನದಲ್ಲಿ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಜನರಲ್ಲಿ ಆಂತಕವನ್ನು ಹುಟ್ಟು ಹಾಕುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20409 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ 47 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 22,697 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,979,730ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,309,484 ಸೋಂಕಿತರು ಗುಣಮುಖರಾಗಿದ್ದು, 526,258 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,988ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Coronavirus Jump In india; 20409 New Cases Reported in Last 24 Hours

ಕೊರೊನಾ ವೈರಸ್ ಪರೀಕ್ಷೆ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,98,761 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,44,06,798 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೋವಿಡ್-19 ಲಸಿಕೆ ವಿತರಣೆ ಮಾಹಿತಿ:

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 38,63,960 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 203,60,46,307 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+