Breaking: ಭಾರತದಲ್ಲಿ ಒಂದೇ 21411 ಮಂದಿಗೆ ಅಂಟಿದ ಕೊರೊನಾ ವೈರಸ್
ನವದೆಹಲಿ, ಜುಲೈ 23: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 21000 ಗಡಿ ದಾಟುತ್ತಿದೆ. ಜುಲೈ ಮತ್ತು ಆಗಸ್ಟ್ ವೇಳೆಗೆ ಕೋವಿಡ್-19 ಅಪಾಯ ಹೆಚ್ಚಾಗುವುದು ಎಂದ ತಜ್ಞರ ಎಚ್ಚರಿಕೆ ನಿಜವಾಗುತ್ತದೆಯೇ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21411 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 67 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 20,726 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,868,476ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,192,379 ಸೋಂಕಿತರು ಗುಣಮುಖರಾಗಿದ್ದು, 525,997 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 150,100ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ. 4.25ರಷ್ಟಿದೆ:
ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 4,80,202 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,21,36,407 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 4.46ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 34,93,209 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 201,68,14,771 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications