ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸುದ್ದಿ: 16 ದಿನಗಳಲ್ಲಿ 10 ಬಾರಿ 100ಕ್ಕಿಂತ ಕಡಿಮೆ ಜನರ ಸಾವು

|
Google Oneindia Kannada News

ನವದೆಹಲಿ, ಫೆಬ್ರವರಿ.16: ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 16 ದಿನಗಳಲ್ಲಿ ನಾಲ್ಕನೇ ಬಾರಿ 10,000ಕ್ಕಿಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 9,121 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,09,25,710ಕ್ಕೆ ಏರಿಕೆಯಾಗಿದೆ.

ಕೊರೊನಾ ಭಯ: ಭಾರತೀಯರಿಗೆ ಇಲ್ಲಿದೆ ಸಂತೋಷದ ಸುದ್ದಿಕೊರೊನಾ ಭಯ: ಭಾರತೀಯರಿಗೆ ಇಲ್ಲಿದೆ ಸಂತೋಷದ ಸುದ್ದಿ

ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆಯೇ ಹೆಚ್ಚಾಗಿದೆ. ಒಂದೇ ದಿನದಲ್ಲಿ 11,805 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 1,06,33,025 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 81 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 1,55,813 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾವೈರಸ್ ಕುರಿತು ಮಹತ್ವದ ಮಾಹಿತಿಗಾಗಿ ಮುಂದೆ ಓದಿ.

ದೇಶದಲ್ಲಿ ಕೊರೊನಾವೈರಸ್ ಗುಣಮುಖರ ಸಂಖ್ಯೆ

ದೇಶದಲ್ಲಿ ಕೊರೊನಾವೈರಸ್ ಗುಣಮುಖರ ಸಂಖ್ಯೆ

ದೇಶದಲ್ಲಿ ಶೇ.97.32ರಷ್ಟು ಕೊರೊನಾವೈರಸ್ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ಜಗತ್ತಿನಲ್ಲೇ ಅತಿಹೆಚ್ಚು ಸೋಂಕಿತರನ್ನು ಗುಣಮುಖಗೊಳಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಭಾರತದ 31 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.97.32ಕ್ಕಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ದಿಯು ಮತ್ತು ದಮನ್, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್, ಮಿಜೋರಾಂ, ಲಡಾಖ್, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಲಕ್ಷದ್ವೀಪ, ಮೇಘಾಲಯ, ಪುದುಚೇರಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಗೋವಾ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಉತ್ತರಾಖಂಡ್, ಒಡಿಶಾ, ಆಂಧ್ರ ಪ್ರದೇಶ, ಹರಿಯಾಣ, ದೆಹಲಿ, ರಾಜಸ್ಥಾನ, ಅಸ್ಸಾಂ, ತೆಲಂಗಾಣ, ಗುಜರಾತ್, ಮಧ್ಯ ಪ್ರದೇಶ, ಉತ್ತರ ಪ್ರದೇಶ, ಛತ್ತೀಸ್ ಗಢ, ಪಶ್ಚಿಮ ಬಂಗಾಳದಲ್ಲಿ ಗುಖಮುಖರ ಪ್ರಮಾಣವೇ ಹೆಚ್ಚಾಗಿದೆ.

ದೇಶದ 5 ರಾಜ್ಯಗಳಲ್ಲಿ ಶೇ.81ರಷ್ಟು ಹೊಸ ಪ್ರಕರಣ

ದೇಶದ 5 ರಾಜ್ಯಗಳಲ್ಲಿ ಶೇ.81ರಷ್ಟು ಹೊಸ ಪ್ರಕರಣ

ಭಾರತದಲ್ಲಿ ಒಂದೇ ದಿನ 9,121 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದರಲ್ಲಿ ಶೇ.81ರಷ್ಟು ಹೊಸ ಸೋಂಕಿತ ಪ್ರಕರಣಗಳು ಐದು ರಾಜ್ಯಗಳಲ್ಲೇ ಪತ್ತೆಯಾಗಿರುವುದು ಸ್ಪಷ್ಟವಾಗಿದೆ. ಮಹಾರಾಷ್ಟ್ರ - 3365, ಕೇರಳ - 2884, ತಮಿಳುನಾಡು - 455, ಕರ್ನಾಟಕ 368, ಛತ್ತೀಸ್ ಗಢ -274 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

16 ದಿನಗಳಲ್ಲಿ 10 ದಿನ 100ಕ್ಕಿಂತ ಕಡಿಮೆ ಸೋಂಕಿತರು ಸಾವು

16 ದಿನಗಳಲ್ಲಿ 10 ದಿನ 100ಕ್ಕಿಂತ ಕಡಿಮೆ ಸೋಂಕಿತರು ಸಾವು

ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಫೆಬ್ರವರಿ ತಿಂಗಳಿನಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಇಳಿಮುಖವಾಗಿದ್ದಷ್ಟೇ ಅಲ್ಲ. ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ. ಕಳೆದ 16 ದಿನಗಳಲ್ಲಿ 10 ದಿನ 100ಕ್ಕಿಂತ ಕಡಿಮೆ ಜನರು ಕೊವಿಡ್-19 ಸೋಂಕಿನಿಂದ ಮೃತಪಟ್ಟಿರುವುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ.

ದೇಶದ ಐದು ರಾಜ್ಯಗಳಲ್ಲಿ ಅತಿಹೆಚ್ಚು ಮಂದಿ ಸಾವು

ದೇಶದ ಐದು ರಾಜ್ಯಗಳಲ್ಲಿ ಅತಿಹೆಚ್ಚು ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 81 ಮಂದಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ ಶೇ.71ರಷ್ಟು ಸಾವಿನ ಪ್ರಮಾಣವು ಐದು ರಾಜ್ಯಗಳಲ್ಲಿಯೇ ದಾಖಲಾಗಿರುವುದು ಸ್ಪಷ್ಟವಾಗಿದೆ. ಮಹಾರಾಷ್ಟ್ರ - 23, ಕೇರಳ - 13, ಪಂಜಾಬ್ - 10, ತಮಿಳುನಾಡು 6 ಮತ್ತು ಛತ್ತೀಸ್ ಗಢದಲ್ಲಿ 5 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

English summary
Coronavirus New Cases Falls Below 10000 For Fourth Time In February.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X