ಕೊರೊನಾ ಆತಂಕ: ಮೇಘಾಲಯದಲ್ಲಿ ಪ್ರವಾಸಿ ಸ್ಥಳಗಳು ಬಂದ್?

ಮೇಘಾಲಯ, ಮಾರ್ಚ್ 19: ಭಾರತದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕಿನಿಂದ ಸೇಫ್ ಆಗಿರುವ ರಾಜ್ಯಗಳು ಮುನ್ನೆಚ್ಚರಿಕೆ ಕ್ರಮ ಜರುಗಿಸಿದೆ. ಮೇಘಾಲಯ ಸರ್ಕಾರದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೊರೊನಾ ವಿರುದ್ಧ ಹೇಗೆ ಕೆಲಸ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸಭೆ ನಡೆಸಿದ್ದಾರೆ.

ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ವೈದ್ಯಕೀಯ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ. ಕೊರೊನಾ ಭೀತಿಯಿಂದ ರಾಜ್ಯದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮಾರ್ಚ್ 31ರವರೆಗೂ ಮೇಘಾಲಯದಲ್ಲಿ ಪ್ರವಾಸಿ ಸ್ಥಳಗಳು ಬಂದ್ ಆಗಲಿದೆ.

ಬಹುಶಃ ಮಾರ್ಚ್ 31ರ ಬಳಿಕಯೂ ಈ ಬಂದ್ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 15ರವರೆಗೂ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲು ಸರ್ಕಾರ ಚಿಂತಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

All Tourist Places In Meghalaya Closed Till 31st March

ಭಾರತದಲ್ಲಿ ಇದುವರೆಗೂ ಸುಮಾರು 174 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು ಮೂರು ಜನ ಸಾವನ್ನಪ್ಪಿದ್ದಾರೆ. ಕರ್ನಾಟಕ, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ಮೇಘಾಲಯ, ಅಸ್ಸಾಂ, ಸಿಕ್ಕಿಂ, ನಾಗಲ್ಯಾಂಡ್ ರಾಜ್ಯಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ. ಆದರೆ, ಸೋಂಕು ತಗುಲುವ ಆತಂಕವಿದ್ದು, ಅಲ್ಲಿನ ರಾಜ್ಯ ಸರ್ಕಾರಗಳು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+