ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊವಿಡ್-19 ಹೆಚ್ಚಾಗುವುದರ ಕಾರಣ ಅರಿಯಿತಾ ಕೇಂದ್ರ?

|
Google Oneindia Kannada News

ನವದೆಹಲಿ, ಜೂನ್.14: ಭಾರತದಲ್ಲಿ ಮುಂದಿನ ಆರು ದಿನಗಳಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ತಪಾಸಣೆ ಸಂಖ್ಯೆಯು ಮೂರು ಪಟ್ಟು ಹೆಚ್ಚಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

Recommended Video

Amit Shah : Government may have made a mistake while dealing with Corona.! | Narendra Modi | BJP

ನವದೆಹಲಿಯಲ್ಲಿ ಕೊವಿಡ್-19 ಪರಿಶೀಲನಾ ಸಭೆಯನ್ನು ನಡೆಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಹರ್ಷವರ್ಧನ್, ನವದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಿದ್ದರು.

ಭಾರತದಲ್ಲಿ ಕೊರೊನಾವೈರಸ್ ಸೋಂಕು ಹೆಚ್ಚಾಗಲು ಈ ತಪ್ಪುಗಳೇ ಕಾರಣ!ಭಾರತದಲ್ಲಿ ಕೊರೊನಾವೈರಸ್ ಸೋಂಕು ಹೆಚ್ಚಾಗಲು ಈ ತಪ್ಪುಗಳೇ ಕಾರಣ!

ಕೇಂದ್ರ ಸರ್ಕಾರವು ನೊವೆಲ್ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೊವಿಡ್-19 ತಪಾಸಣೆಯ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಕೊರೊನಾ ವೈರಸ್ ಸೋಂಕು ತಪಾಸಣೆ ಸಂಖ್ಯೆ ಡಬಲ್

ಕೊರೊನಾ ವೈರಸ್ ಸೋಂಕು ತಪಾಸಣೆ ಸಂಖ್ಯೆ ಡಬಲ್

ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದು, ಇನ್ನೆರೆಡು ದಿನಗಳಲ್ಲಿ ಸೋಂಕು ತಪಾಸಣೆಯ ಸಂಖ್ಯೆಯನ್ನು ಇಮ್ಮಡಿಗೊಳಿಸಲಾಗುತ್ತದೆ. ಅಂದರೆ ಈ ಮೊದಲು ದಿನಕ್ಕೆ 100 ಜನರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸುತ್ತಿದ್ದರೆ, ಇನ್ನುಮುಂದೆ ದಿನಕ್ಕೆ 100ರ ಬದಲು 200 ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ.

ಮೂರು ಪಟ್ಟು ಸೋಂಕಿತರ ತಪಾಸಣೆ ಪ್ರಮಾಣ ಏರಿಕೆ

ಮೂರು ಪಟ್ಟು ಸೋಂಕಿತರ ತಪಾಸಣೆ ಪ್ರಮಾಣ ಏರಿಕೆ

ನವದೆಹಲಿಯಷ್ಟೇ ಅಲ್ಲ. ರಾಷ್ಟ್ರಾದ್ಯಂತ ಕೊರೊನಾ ವೈರಸ್ ಸೋಂಕಿತರ ತಪಾಸಣೆಯ ವೇಗವನ್ನು ಹೆಚ್ಚಿಸಬೇಕಿದೆ. ಹೀಗಾಗಿ ಮುಂದಿನ ಆರು ದಿನಗಳಲ್ಲಿ ಮೂರು ಪಟ್ಟು ತಪಾಸಣಾ ಪ್ರಮಾಣವನ್ನು ಏರಿಕೆ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಅಂದರೆ ಆರು ದಿನಗಳ ನಂತರ ಪ್ರತಿನಿತ್ಯ 100ರ ಬದಲಿಗೆ 600 ಜನರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಬೆಡ್ ಕೊರತೆ ನಿವಾರಿಸಲು 500 ರೈಲ್ವೆ ಕೋಚ್!

ದೆಹಲಿಯಲ್ಲಿ ಬೆಡ್ ಕೊರತೆ ನಿವಾರಿಸಲು 500 ರೈಲ್ವೆ ಕೋಚ್!

ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಹೆಚ್ಚಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಐಸೋಲೇಷನ್ ವಾರ್ಡ್ ಗಳಾಗಿ ಪರಿವರ್ತನೆಯಾಗಿರುವ 500 ರೈಲ್ವೆ ಕೋಚ್ ಗಳನ್ನು ನವದೆಹಲಿಯಲ್ಲಿ ಸೋಂಕಿತರ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರವು ಘೋಷಿಸಿದೆ. ಈ 500 ರೈಲ್ವೆ ಕೋಚ್ ಗಳಲ್ಲಿ ಕನಿಷ್ಠ 8,000 ಕೊರೊನಾ ವೈರಸ್ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ

ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ

ಇನ್ನು, ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ 3,22,318 ಮಂದಿಗೆ ಕೊರೊನಾ ವೈರಸ್ ಸೋಂಕು ಕನ್ಫರ್ಮ್ ಆಗಿದೆ. ಈ ಪೈಕಿ 1,62,451 ಸೋಂಕಿತರು ಗುಣಮುಖರಾಗಿದ್ದರೆ, 1,50,626 ಜನ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಈವರೆಗೂ ದೇಶದಲ್ಲಿ ಮಹಾಮಾರಿಗೆ 9,204ಕ್ಕೂ ಅಧಿಕ ಮಂದಿ ಪ್ರಾಣ ಬಿಟ್ಟಿದ್ದಾರೆ.

English summary
Coronavirus Testing to be increased in Delhi by three times in next 6 days: Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X