ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ 2ನೇ ಅಲೆ ಯಾವ ವಯಸ್ಸಿನವರಿಗೆ ಹೆಚ್ಚು ಅಪಾಯಕಾರಿ!?

|
Google Oneindia Kannada News

ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಶೇ.70ರಷ್ಟು ಸೋಂಕಿತರು 40 ವರ್ಷಕ್ಕಿಂತ ಮೇಲ್ಪಟ್ಟವರೇ ಆಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ನಿರ್ದೇಶಕ ಬಲರಾಮ್ ಭಾರ್ಗವನ್ ತಿಳಿಸಿದ್ದಾರೆ.

ದೇಶದಲ್ಲಿ ಕಾಣಿಸಿಕೊಂಡ ಕೊವಿಡ್-19 ಸೋಂಕಿನ ಎರಡೂ ಅಲೆಗಳು 40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹೆಚ್ಚು ಅಪಾಯಕಾರಿಯಾಗಿವೆ. ಮೊದಲ ಅಲೆ ಮತ್ತು ಎರಡನೇ ಅಲೆಯಲ್ಲಿ ಸಾವಿನ ಪ್ರಕರಣಗಳು ಮತ್ತು ಆಸ್ಪತ್ರೆಗೆ ದಾಖಲಾದ ಸೋಂಕಿತರ ಸಂಖ್ಯೆಯು ಬಹುಪಾಲು ಸಮನಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಆಮ್ಲಜನಕದ ಸಿಲಿಂಡರ್ ಅಭಾವ ಎದುರಾಗಿದೆ. ಮೊದಲ ಅಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಎರಡನೇ ಅಲೆಯಲ್ಲಿ ಈ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲ ಎಂದು ತಿಳಿದು ಬಂದಿದೆ.

ಕೊರೊನಾವೈರಸ್ ಎರಡನೇ ಅಲೆಯ ಆತಂಕ

ಕೊರೊನಾವೈರಸ್ ಎರಡನೇ ಅಲೆಯ ಆತಂಕ

ಭಾರತದಲ್ಲಿ ಸೃಷ್ಟಿಯಾಗಿರುವ ಕೊರೊನಾವೈರಸ್ ಸೋಂಕಿನಿಂದ ರೋಗಿಗಳಲ್ಲಿ ಅತಿಹೆಚ್ಚು ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಮೊದಲ ಅಲೆಯಲ್ಲಿ ಗಂಟಲು ನೋವು, ಒಣ ಕೆಮ್ಮು ಸೇರಿದಂತೆ ಇತರೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಎರಡು ಅಲೆಗಳಲ್ಲಿ ಸೋಂಕಿತರು ಆಸ್ಪತ್ರೆಗೆ ದಾಖಲಾದ ರೋಗಿಗಳ ಪ್ರಮಾಣ ಮತ್ತು ಸಾವಿನ ಸಂಖ್ಯೆಯು ಸಮನಾಗಿದೆ. ಮೊದಲ ಅಲೆಯಲ್ಲಿ ಶೇ.41.5ರಷ್ಟು ಸೋಂಕಿತರಿಗೆ ಆಕ್ಸಿಜನ್ ಅಗತ್ಯವಿದ್ದು, ಎರಡನೇ ಅಲೆಯಲ್ಲಿ ಶೇ.54.5 ರೋಗಿಗಳಿಗೆ ಆಕ್ಸಿಜನ್ ಬೇಕಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ಕೊರೊನಾವೈರಸ್ ಎರಡನೇ ಅಲೆ ಯಾರಿಗೆ ಹೆಚ್ಚು ಅಪಾಯ?

ಕೊರೊನಾವೈರಸ್ ಎರಡನೇ ಅಲೆ ಯಾರಿಗೆ ಹೆಚ್ಚು ಅಪಾಯ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಕಡಿಮೆ ವಯಸ್ಸಿನವರಿಗೆ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆರಂಭದಲ್ಲಿ ಅಂಕಿ-ಅಂಶಗಳು ಅದೇ ರೀತಿಯಾಗಿದ್ದವು. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ಶೇ.70ರಷ್ಟು ಕೊವಿಡ್-19 ಸೋಂಕಿತರು 40 ವರ್ಷಕ್ಕಿಂತ ಮೇಲ್ಪಟ್ಟವರೇ ಆಗಿದ್ದಾರೆ. ಇದರಿಂದ ಎರಡೂ ಅಲೆಗಳಲ್ಲಿ ಕೊರೊನಾವೈರಸ್ ಸೋಂಕಿನಿಂದ ಹಿರಿಯ ವಯಸ್ಸಿನವರೇ ಹೆಚ್ಚು ಅಪಾಯವನ್ನು ಎದುರಿಸುತ್ತಿರುವುದು ಗೊತ್ತಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ತಿಳಿಸಿದೆ.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ರೋಗದ ಲಕ್ಷಣ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ರೋಗದ ಲಕ್ಷಣ

ಭಾರತದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾವೈರಸ್ ಸೋಂಕಿನ ಅಲೆಯಲ್ಲಿ ಲಕ್ಷಣಗಳಿಲ್ಲದೇ ಅತಿಹೆಚ್ಚು ಜನರಲ್ಲಿ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಸೋಂಕು ತಗುಲಿದ್ದರೂ ಕೂಡಾ ಸೋಂಕಿತರಲ್ಲಿ ಯಾವುದೇ ರೋಗದ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಮೊದಲ ಅಲೆಯಲ್ಲಿ ಈ ರೀತಿಯಲ್ಲಿ 7600 ರೋಗಿಗಳು ಪತ್ತೆಯಾಗಿದ್ದರೆ, ಎರಡನೇ ಅಲೆಯಲ್ಲಿ 1885 ರೋಗಿಗಳು ಪತ್ತೆಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Recommended Video

ದೀಡಿರ್ ಮಾರ್ಗಸೂಚಿಯಲ್ಲಿ ಬದಲಾವಣೆ !! | Oneindia Kannada
ದೇಶದಲ್ಲಿ ಕೊರೊನಾವೈರಸ್ 2ನೇ ಅಲೆಯ ಭೀತಿ

ದೇಶದಲ್ಲಿ ಕೊರೊನಾವೈರಸ್ 2ನೇ ಅಲೆಯ ಭೀತಿ

ದೇಶದಲ್ಲಿ ಒಂದೇ ದಿನ 273810 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,619 ಮಂದಿ ಪ್ರಾಣ ಬಿಟ್ಟಿದ್ದು, 1,44,178 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,50,61,919 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,29,53,821 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,78,769 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 19,29,329 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
Coronavirus Two Waves: More Than 70 Per cent Covid Patients Age Is Above 40 Years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X