Breaking: ಉಪರಾಷ್ಟ್ರಪತಿ ಚುನಾವಣೆ: ಮತ ಎಣಿಕೆ ಆರಂಭ
ನವದೆಹಲಿ, ಆಗಸ್ಟ್.6: ಭಾರತದ 16ನೇ ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯಗೊಂಡಿದ್ದು, ಮತ ಎಣಿಕೆಯೂ ಆರಂಭಗೊಂಡಿದೆ.
ಭಾರತದ ಎರಡನೇ ಅತ್ಯುನ್ನತ ನಾಗರಿಕ ಸ್ಥಾನವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಬೆಂಬಲಿತ ಜಗದೀಪ್ ದಂಖರ್ ಅವರು ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಒಕ್ಕೂಟದಿಂದ ಕಾಂಗ್ರೆಸ್ ಬೆಂಬಲಿತ ಮಂಗಳೂರು ಮೂಲದವರಾದ ಶ್ರೀಮತಿ ಮಾರ್ಗರೇಟ್ ಆಳ್ವ ಅವರು ಕಣಕ್ಕೆ ಇಳಿದಿದ್ದರು.
ಶನಿವಾರ 5 ಗಂಟೆಗೆ ಮತದಾನ ಮುಕ್ತಾಯವಾಗಿದೆ. ಸುಮಾರು ಶೇ. 93ರಷ್ಟು ಸಂಸದರು ಮತದಾನ ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿ ಒಟ್ಟು ಸಂಸದರ ಸಂಖ್ಯೆ 780 ಆಗಿದ್ದು, ಅದರಲ್ಲಿ ಬಿಜೆಪಿ 303 ಇದರಲ್ಲಿ 91 ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ 394 ಮಂದಿ ಇದ್ದಾರೆ. ಎನ್‌ಡಿಎ ಒಕ್ಕೂಟದ 47+ 5 ಮಂದಿ ನಾಮನಿರ್ದೇಶೀತರು ಸೇರಿ 446 ಮಂದಿ ಹಾಗೂ ಎನ್‌ಡಿಎ ಅಲ್ಲದವರು 81 ಮಂದಿ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.

ಎನ್‌ಡಿಎ ಬೆಂಬಲಿತ ಜಗದೀಪ್ ದಂಖರ್ ಅವರಿಗೆ ಶೇ. 70ರಷ್ಟ್ರು ಬಹುಮತ ಸಿಗುವ ಸಾಧ್ಯತೆ ಇದೆ ಎಂದು ಅಂದಾಜು ಮಾಡಲಾಗಿದೆ. ಇನ್ನೂ ಯುಪಿಎ ಬೆಂಬಲಿತ ಮಾರ್ಗರೇಟ್ ಆಳ್ವ ಅವರ ಪರ ಎಷ್ಟು ಮತಗಳು ಚಲಾಯಿತವಾಗಿವೆ ಎಂಬ ಅಂದಾಜು ಲಭ್ಯವಾಗಿಲ್ಲ.

ಮಾರ್ಗರೇಟ್ ಆಳ್ವ ಅವರಿಗೆ ಟಿಎಸ್‌ಆರ್ ಜಾರ್ಖಂಡ್ ಮುಕ್ತಿ ಮೋರ್ಚಾ, ಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಬೆಂಬಲ ಘೋಷಿಸಿದ್ದವು. ಮಾಜಿ ಸಚಿವರಾಗಿದ್ದ ಮಾರ್ಗರೇಟ್ ಆಳ್ವಾ ಅವರು ಮೂಲತ ವಕೀಲೆಯಾಗಿದ್ದವರು. ಮಂಗಳೂರಿನವರಾದ ಅವರು ಕಾಂಗ್ರೆಸ್‌ನಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡು ರಾಜಕೀಯ ಉನ್ನತ ಸ್ಥಾನವನ್ನು ಅಲಂಕರಿಸಿದವರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications