ದೇಶ ಮನ್ ಕೀ ಬಾತ್ ಅಲ್ಲ ಜನ್ ಕೀ ಬಾತ್ ಮೇಲೆ ನಡೆಯತ್ತೆ
ಬೆಂಗಳೂರು, ಫೆಬ್ರವರಿ 11 : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ ಪಡೆದು ಪುನಃ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತೀವ್ರವಾದ ಮುಖಭಂಗವಾಗಿದೆ.
ಮಂಗಳವಾರ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 63 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದೆ. ಬಿಜೆಪಿ 7 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದು, ಕಾಂಗ್ರೆಸ್ ಸಾಧನೆ ಶೂನ್ಯ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೇಶದ ವಿವಿಧ ರಾಜಕೀಯ ನಾಯಕರು ಆಮ್ ಆದ್ಮಿ ಪಕ್ಷ ಮತ್ತು ಅರವಿಂದ ಕೇಜ್ರಿವಾಲ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಫೆಬ್ರವರಿ 14ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ದೆಹಲಿ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಅರವಿಂದ ಕೇಜ್ರಿವಾಲ್‌ಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ತೋರಿಸಿದ್ದಾರೆ. ದೇಶ ಜನ್ ಕೀ ಬಾತ್ ಮೇಲೆ ನಡೆಯುತ್ತದೆ. ಮನ್ ಕೀ ಬಾತ್ ಮೇಲೆ ಅಲ್ಲ" ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ನಾಯಕರು ಅರವಿಂದ್ ಕೇಜ್ರಿವಾಲ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.












Click it and Unblock the Notifications