ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಕಿಂಗ್ ಸುದ್ದಿ: ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ ಮತ್ತಷ್ಟು ವಿಳಂಬ!?

|
Google Oneindia Kannada News

ನವದೆಹಲಿ, ಸಪ್ಟೆಂಬರ್ 28: ಭಾರತದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವ ಭಾರತ್ ಬಯೋಟೆಕ್ ಕಂಪನಿಗೆ ವಿಶ್ವ ಆರೋಗ್ಯ ಸಂಸ್ಥೆ ಕೆಲವು ತಾಂತ್ರಿಕ ಪ್ರಶ್ನೆಗಳನ್ನು ರವಾನಿಸಿದೆ.

ಮೂಲಗಳ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೂ ಮೊದಲು ಕೆಲ ತಾಂತ್ರಿಕ ಪ್ರಶ್ನೆಗಳಿಗೆ ಉತ್ತರಿಸುವಂತೆ ತಿಳಿಸಿದೆ. ಈ ಹಿನ್ನೆಲೆ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಭಾರತೀಯರ ಮೇಲೆ ಅದರಲ್ಲೂ ವಿದೇಶಗಳಿಗೆ ವ್ಯಾಸಂಗ ಮಾಡಲು ತೆರಳಲಿರುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ.

5 ರಿಂದ 18 ವರ್ಷದ ಮಕ್ಕಳ ಮೇಲೆ 2/3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಅನುಮತಿ 5 ರಿಂದ 18 ವರ್ಷದ ಮಕ್ಕಳ ಮೇಲೆ 2/3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಅನುಮತಿ

ತುರ್ತು ಬಳಕೆಗೆ ಅನುಮೋದನೆ ಸಿಗದ ಹೊರತಾಗಿ ಕೊವ್ಯಾಕ್ಸಿನ್ ಲಸಿಕೆಯನ್ನು ಜಗತ್ತಿನ ಇತರೆ ರಾಷ್ಟ್ರಗಳು ಅಧಿಕೃತ ಎಂದು ಸ್ವೀಕರಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಹೈದರಾಬಾದ್ ಮೂಲದ ಔಷಧ ತಯಾರಕರು ಕ್ಲಿಯರೆನ್ಸ್‌ಗೆ ಅಗತ್ಯವಿರುವ ಎಲ್ಲ ದತ್ತಾಂಶವನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದರೂ, ಭಾರತ್ ಬಯೋಟೆಕ್‌ಗಾಗಿ ವಿಶ್ವ ಆರೋಗ್ಯ ಸಂಸ್ಥೆಯು ಹಲವು ಪ್ರಶ್ನೆಗಳನ್ನು ರವಾನಿಸಿದೆ. ಕೊವ್ಯಾಕ್ಸಿನ್ ಲಸಿಕೆ ಅನುಮೋದನೆಗೆ ಕೇಳಿರುವ ಪ್ರಶ್ನೆಗಳೇನು?, ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ ಹಾಗೂ ಲಭ್ಯತೆಯ ಕುರಿತು ಒಂದು ವರದಿ.

ಲಸಿಕೆ ಅನುಮೋದನೆ ನಿರೀಕ್ಷೆಯಲ್ಲಿದ್ದ ಭಾರತ್ ಬಯೋಟೆಕ್

ಲಸಿಕೆ ಅನುಮೋದನೆ ನಿರೀಕ್ಷೆಯಲ್ಲಿದ್ದ ಭಾರತ್ ಬಯೋಟೆಕ್

ಜಾಗತಿಕ ಸಂಸ್ಥೆಯು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸುಳಿವು ನೀಡಿದ ಕೆಲವೇ ದಿನಗಳಲ್ಲಿ ವಿಳಂಬದ ಸೂಚನೆ ಹೊರ ಬಿದ್ದಿದೆ. "ಕೊವ್ಯಾಕ್ಸಿನ್ ಲಸಿಕೆ ಅನುಮೋದನೆಗಾಗಿ ದಾಖಲೆಗಳನ್ನು ಸಲ್ಲಿಸುವ ವಿಧಾನವಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಲಸಿಕೆ ತುರ್ತು ಬಳಕೆಯ ಅವಕಾಶವನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯದ ರಾಜ್ಯ ಸಚಿವರಾದ ಡಾ ಭಾರತಿ ಪ್ರವೀಣ್ ಪವಾರ್ ಕಳೆದ ಶುಕ್ರವಾರ ತಿಳಿಸಿದ್ದರು.

ಸೆಪ್ಟೆಂಬರ್ ತಿಂಗಳಾಂತ್ಯದ ವೇಳೆಗೆ ಕೊವ್ಯಾಕ್ಸಿನ್ ಅನುಮೋದನೆ

ಸೆಪ್ಟೆಂಬರ್ ತಿಂಗಳಾಂತ್ಯದ ವೇಳೆಗೆ ಕೊವ್ಯಾಕ್ಸಿನ್ ಅನುಮೋದನೆ

ಈ ಮೊದಲು ಕೊರೊನಾವೈರಸ್ ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ತಂಡದ ಅಧ್ಯಕ್ಷರಾದ ಡಾ.ವಿ.ಕೆ. ಪೌಲ್ ಕೊವ್ಯಾಕ್ಸಿನ್ ಅನುಮೋದನೆ ಬಗ್ಗೆ ಉಲ್ಲೇಖಿಸಿದ್ದರು. ಸೆಪ್ಟೆಂಬರ್ ತಿಂಗಳಾಂತ್ಯದ ವೇಳೆಗೆ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ಸಿಗಲಿದೆ ಎಂದು ಹೇಳಿದ್ದರು. ಭಾರತ್ ಬಯೋಟೆಕ್ ಸಂಸ್ಥೆಯ ಪ್ರಕಾರ, ಕೊವಾಕ್ಸಿನ್‌ನ ಮೂರು ಹಂತದ ವೈದ್ಯಕೀಯ ಪ್ರಯೋಗಗಳಲ್ಲಿ ಶೇ.77.8ರಷ್ಟು ಪರಿಣಾಮಕಾರಿತ್ವ ಹೊಂದಿವೆ ಎಂದು ಗೊತ್ತಾಗಿದೆ.

ದೇಶದಲ್ಲಿ ಎಷ್ಟು ಕೊರೊನಾವೈರಸ್ ಲಸಿಕೆಗೆ ಅನುಮೋದನೆ?

ದೇಶದಲ್ಲಿ ಎಷ್ಟು ಕೊರೊನಾವೈರಸ್ ಲಸಿಕೆಗೆ ಅನುಮೋದನೆ?

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ. ಇದರ ಜೊತೆಗೆ ವಿಶ್ವ ಆರೋಗ್ಯ ಸಂಸ್ಥೆಯು ಫೈಜರ್-ಬಯೋನಟೆಕ್, ಜಾನ್ಸನ್ ಆಂಡ್ ಜಾನ್ಸನ್, ಮಾಡರ್ನಾ ಮತ್ತು ಸಿನೋಫಾರ್ಮಾ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ನೀಡಲಾಗಿದೆ.

24 ಗಂಟೆಗಳಲ್ಲೇ 88.98 ಲಕ್ಷ ಜನರಿಗೆ ಕೊವಿಡ್-19 ಲಸಿಕೆ

24 ಗಂಟೆಗಳಲ್ಲೇ 88.98 ಲಕ್ಷ ಜನರಿಗೆ ಕೊವಿಡ್-19 ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಮುಖೇನ ಸೋಂಕು ಹರಡುವಿಕೆ ಮತ್ತು ಸೋಂಕಿನ ಅಪಾಯವನ್ನು ತಗ್ಗಿಸುವ ಪ್ರಯತ್ನ ಮುಂದುವರಿದಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಶುರುವಾಗಿ 255 ದಿನಗಳಾಗಿದ್ದು, ಸೋಮವಾರ ರಾತ್ರಿ 7 ಗಂಟೆ ವೇಳೆಗೆ 88,98,560 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 84,50,28,655 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಭಾರತದಲ್ಲಿ ಈವರೆಗೂ 86,93,79,970 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 63,86,88,470 ಮಂದಿಗೆ ಮೊದಲ ಡೋಸ್ ಹಾಗೂ 23,06,91,500 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Covaxin Clearance may be Delayed Further Time; Sources said WHO Asked to Company Over Technical Queries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X