ಕೋವ್ಯಾಕ್ಸಿನ್‌ನ 3ನೇ ಡೋಸ್ ಭರವಸೆ ಉಳಿಸಿಕೊಳ್ಳಲಿದೆ: ICMR

ನವದೆಹಲಿ, ಜನವರಿ 10: ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಡೋಸ್ ಭರವಸೆಯನ್ನು ಉಳಿಸಿಕೊಳ್ಳಲಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.

ದೇಶಾದ್ಯಂತ ಈಗಾಗಲೇ 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಇಂದಿನಿಂದ ಪ್ರಿಕಾಷನ್ ಡೋಸ್​ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಂದಿನಿಂದ ಪ್ರಿಕಾಷನ್​ ಡೋಸ್​ ನೀಡಿಕೆ ಆರಂಭವಾಗಲಿದೆ.

ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್​ ವೆಬ್​​​​​ಸೈಟ್​ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್​25 ರಂದು ದಿಢೀರ್​ ಆಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 15-18 ವರ್ಷದ ಮಕ್ಕಳು ಹಾಗೂ ಕೋವಿಡ್​ ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಪ್ರಿಕಾಷನ್​ ಡೋಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಪ್ರಿಕಾಷನ್​( ಬೂಸ್ಟರ್​ ಡೋಸ್​) ಲಸಿಕೆ ನೀಡಿಕೆಗೆ ಚಾಲನೆ ಸಿಗಲಿದೆ.

Covaxin’s Third Dose Holds Promise, Says ICMR As India Rolls Out Booster Shot

ರೂಪಾಂತರಿ ಓಮಿಕ್ರಾನ್ ತಡೆಯಲು ಹಲವು ತಜ್ಞರು ಬೂಸ್ಟರ್ ಡೋಸ್​ಗೆ ಶಿಫಾರಸು ಮಾಡಿದ್ದರು. ಜನವರಿ 10 ರಿಂದ ಅಂದರೆ ಇಂದಿನಿಂದ ರಾಜ್ಯದಲ್ಲೂ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ.

ಕೋವ್ಯಾಕ್ಸಿನ್‌ ಮೂರನೇ ಡೋಸ್ ಕೊರೊನಾ ವಿರುದ್ಧ ಹೋರಾಡುವ ಭರವಸೆಯನ್ನು ಉಳಿಸಿಕೊಳ್ಳಲಿದೆ, ಎರಡೂ ಡೋಸ್‌ಗಳನ್ನು ಪಡೆದು ಆರು ತಿಂಗಳುಗಳು ಕಳೆದ ಬಳಿಕ ಮೂರನೇ ಡೋಸ್ ತೆಗೆದುಕೊಳ್ಳಬೇಕಾಗುತ್ತದೆ.

ಬೂಸ್ಟರ್ ಡೋಸ್ ತೆಗೆದುಕೊಂಡವರಲ್ಲಿ ಹೆಚ್ಚು ಪ್ರತಿಕಾಯಗಳು ಸೃಷ್ಟಿಯಾಗಲಿವೆ, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ ಎಂದು ಐಸಿಎಂಆರ್ ಹೇಳಿದೆ.

ರೂಪಾಂತರಿ ಓಮಿಕ್ರಾನ್ ತಡೆಯಲು ಹಲವು ತಜ್ಞರು ಬೂಸ್ಟರ್ ಡೋಸ್ಗೆ ಶಿಫಾರಸು ಮಾಡಿದ್ದರು. ಜನವರಿ 10 ರಿಂದ ಅಂದರೆ ಇಂದಿನಿಂದ ರಾಜ್ಯದಲ್ಲೂ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಲಸಿಕಾಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಕೋವಿನ್ ಪೋರ್ಟಲ್‌ ನಲ್ಲಿ ನೋಂದಾಯಿಸಿದಂತೆ ಎರಡು ಡೋಸ್ ಪಡೆದಿರಬೇಕು. ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳಾಗಿರಬೇಕು)ಆಗಿರಬೇಕು.ಎರಡು ಡೋಸ್ ಪಡೆದಿರುವ ಬಗ್ಗೆ ಮಾಹಿತಿ ಒದಗಿಸಬೇಕು. ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮೂರನೇ ಡೋಸ್ ಕೋವಿಶೀಲ್ಡ್ ಅನ್ನೇ ಪಡೆಯಬೇಕು. ಕೋವ್ಯಾಕ್ಸಿನ್ ಪಡೆದವರು ಮೂರನೇ ಡೋಸ್ಗೆ ಕೋವ್ಯಾಕ್ಸಿನ್ ಅನ್ನೇ ಪಡೆಯಬೇಕು.

ಕಳೆದ ಶುಕ್ರವಾರದಿಂದಲೇ ಕೋವಿನ್ ವೆಬ್‌ ಸೈಟ್‌ ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್ 25 ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, 15-18 ವರ್ಷದ ಕಿರಿಯರು, ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕ್ರಮ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಬೂಸ್ಟರ್ ಡೋಸ್‌ ಲಸಿಕೆ ನೀಡಿಕೆಗೆ ಚಾಲನೆ ಸಿಕ್ಕಿದೆ.

ಎಲ್ಲಾ ಸರ್ಕಾರಿ ಲಸಿಕಾಕರಣ ಕೇಂದ್ರಗಳಲ್ಲಿ ಲಭ್ಯ.ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲೂ ಲಭ್ಯ.ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+