• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಕ್ಸಿಜನ್ ವ್ಯರ್ಥವಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ

|

ನವದೆಹಲಿ, ಏಪ್ರಿಲ್ 15: ಆಮ್ಲಜನಕ ವ್ಯರ್ಥವಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೊರೊನಾ ಪೀಡಿತ ರೋಗಿಗಳ ಚಿಕಿತ್ಸೆಯಲ್ಲಿ ವೈದ್ಯಕೀಯ ಆಮ್ಲಜನಕವು ಒಂದು ನಿರ್ಣಾಯಕ ಅಂಶವಾಗಿದೆ. ಮಾರ್ಚ್ 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರ ಸಚಿವಾಲಯದ ಸಶಕ್ತ ಗುಂಪ(ಇಜಿ2)ನ್ನು ರಚಿಸಲಾಗಿದ್ದು ಇದು ಪೀಡಿತ ರಾಜ್ಯಗಳಲ್ಲಿನ ವೈದ್ಯಕೀಯ ಆಮ್ಲಜನಕ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳ ಲಭ್ಯತೆಯನ್ನು ಅಧ್ಯಯನ ಮಾಡಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆಕ್ಸಿಜನ್ ಮಾಸ್ಕ್ ಕಿತ್ತುಹಾಕಿದ ವಾರ್ಡ್ ಬಾಯ್: ಕೋವಿಡ್ ರೋಗಿ ಸಾವುಆಕ್ಸಿಜನ್ ಮಾಸ್ಕ್ ಕಿತ್ತುಹಾಕಿದ ವಾರ್ಡ್ ಬಾಯ್: ಕೋವಿಡ್ ರೋಗಿ ಸಾವು

ದೇಶದಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕವಿದೆ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಇದರ ಮಧ್ಯೆ ವೈದ್ಯಕೀಯ ಆಮ್ಲಜನಕವನ್ನು ತರ್ಕಬದ್ಧವಾಗಿ ಬಳಸಿಕೊಳ್ಳಬೇಕು ಮತ್ತು ವ್ಯರ್ಥವಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳಿಗೆ ಸೂಚಿಸಿದೆ.

ದೇಶದಲ್ಲಿ ಸುಮಾರು 7127 ಮೆ.ಟನ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯವಿದೆ. ಇನ್ನು ಅಗತ್ಯಕ್ಕೆ ಅನುಗುಣವಾಗಿ, ಉಕ್ಕಿನ ಸ್ಥಾವರಗಳೊಂದಿಗೆ ಲಭ್ಯವಿರುವ ಹೆಚ್ಚುವರಿ ಆಮ್ಲಜನಕವನ್ನು ಸಹ ಬಳಸಿಕೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಆಮ್ಲಜನಕ ಘಟಕಗಳ ಉತ್ಪಾದನೆ ಮತ್ತು ಲಭ್ಯವಿರುವ ಹೆಚ್ಚುವರಿ ದಾಸ್ತಾನುಗಳ ಜೊತೆಗೆ, ಪ್ರಸ್ತುತ ಆಮ್ಲಜನಕದ ಲಭ್ಯತೆಯು ಸಾಕಾಗುತ್ತದೆ ಎಂದು ಸಚಿವಾಲಯ ಹೇಳಿದೆ. ಕಳೆದ ಎರಡು ದಿನಗಳಿಂದ ಪ್ರತಿದಿನ ತನ್ನ ಸಂಪೂರ್ಣ ಸಾಮರ್ಥ್ಯದಲ್ಲಿ ಆಮ್ಲಜನಕವನ್ನು ಉತ್ಪಾದಿಸುತ್ತಿದೆ ಎಂದು ತಿಳಿಸಿದೆ.

ಅಲ್ಲದೆ, ಜಿಲ್ಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಆಮ್ಲಜನಕವನ್ನು ಸುಗಮವಾಗಿ ಪೂರೈಸಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. ಸಿಲಿಂಡರ್‌ಗಳು, ಟ್ಯಾಂಕರ್‌ಗಳು ಇತ್ಯಾದಿಗಳ ಪರಿಶೀಲನಾ ಅವಶ್ಯಕತೆ ಇದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

English summary
The Centre on Thursday asked states to make rational use of medical oxygen and ensure there is no wastage while stressing that there is sufficient stock of oxygen in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X