ದೇಶದಲ್ಲಿ ಇಂದಿನಿಂದ ಲಸಿಕಾ ಉತ್ಸವ; ಅರ್ಹರಿಗೆ ಕೋವಿಡ್ ಲಸಿಕೆ

ನವದೆಹಲಿ, ಏಪ್ರಿಲ್ 11; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಭಾನುವಾರದಿಂದ 4 ದಿನಗಳ ಕಾಲ ದೇಶದಲ್ಲಿ 'ಲಸಿಕಾ ಉತ್ಸವ' ಆಯೋಜನೆ ಮಾಡಲಾಗಿದೆ.

ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಸೂಚನೆಯಂತೆ 'ಲಸಿಕಾ ಉತ್ಸವ' ಏಪ್ರಿಲ್ 11 ರಿಂದ 14ರ ತನಕ ದೇಶದಲ್ಲಿ ನಡೆಯುತ್ತಿದೆ. ಅರ್ಹರೆಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿಯನ್ನು ಉತ್ಸವ ಹೊಂದಿದೆ.

ಉತ್ತರ ಪ್ರದೇಶ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳು 'ಲಸಿಕೆ ಉತ್ಸವ'ದಲ್ಲಿ ಅರ್ಹರಿಗೆ ಲಸಿಕೆ ಹಾಕಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿವೆ. ಉತ್ತರ ಪ್ರದೇಶದಲ್ಲಿ 6000 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ.

COVID 19 Four Days Tika Utsav In Country From April 11

"ಲಸಿಕೆ ಪಡೆಯಲು ಜನರು ಸ್ವಯಂ ಪ್ರೇರಿತವಾಗಿ ಮುಂದೆ ಬರಬೇಕು" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ. ನಾಲ್ಕು ದಿನಗಳ ಅವಧಿಯಲ್ಲಿ ಸುಮಾರು 4 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿಯನ್ನು ರಾಜ್ಯ ಹೊಂದಿದೆ.

"ಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಅರ್ಹರು ಲಸಿಕೆಯನ್ನು ಪಡೆಯಬೇಕು" ಎಂದು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಕೋವಿಡ್ ಲಸಿಕೆ ಕೊರತೆ ಇರುವುದಾಗಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಶ್ನೆಯನ್ನು ಎತ್ತಿದ್ದಾರೆ. "ರಾಜ್ಯದಲ್ಲಿ 5 ದಿನಕ್ಕೆ ಆಗುವಷ್ಟು ಲಸಿಕೆ ಮಾತ್ರ ಉಳಿದಿದೆ" ಎಂದು ಪಂಜಾಬ್ ಮುಖ್ಯಮಂತ್ರಿಗಳು ಹೇಳಿದ್ದಾರೆ. ದೆಹಲಿಯಲ್ಲಿ 10 ದಿನಕ್ಕೆ ಆಗುವಷ್ಟು, ಜಾರ್ಖಂಡ್‌ನಲ್ಲಿ 2 ದಿನಕ್ಕೆ ಆಗುವಷ್ಟು ಲಸಿಕೆ ಮಾತ್ರ ಉಳಿದಿದೆ.

ಭಾರತದಲ್ಲಿ ಕೋವಿಡ್ ಲಸಿಕಾ ಅಭಿಯಾನ ಆರಂಭವಾದ ಬಳಿಕ 10 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ಭಾರತ 85 ದಿನದಲ್ಲಿಯೇ 100 ಮಿಲಿಯನ್ ಮಾರ್ಕ್ ಮುಟ್ಟಿದ್ದರೆ ಅಮೆರಿಕ 89 ದಿನಗಳನ್ನು ತೆಗೆದುಕೊಂಡಿತು. ಚೀನಾ 102 ದಿನದಲ್ಲಿ 10 ಕೋಟಿ ಜನರಿಗೆ ಲಸಿಕೆ ಹಾಕಿದೆ.

ಭಾರತದಲ್ಲಿ ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಹೆಚ್ಚಾಗುತ್ತಿವೆ. ಮರಾಷ್ಟ್ರ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯ ಪ್ರದೇಶ ಮತ್ತು ಕೇರಳ ರಾಜ್ಯಗಳಿಂದ ಶೇ 60.62ರಷ್ಟು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+