ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ. 100ರಷ್ಟು ಹೆಚ್ಚಳ: ಕೇಂದ್ರ ಆರೋಗ್ಯ ಸಚಿವಾಲಯ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 29: ಮಂಗಳವಾರ ಬೆಳ್ಳಂಬೆಳಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುಡ್‌ನ್ಯೂಸ್ ನೀಡಿದೆ. ಕಳೆದ ಒಂದು ತಿಂಗಳಲ್ಲಿ ಭಾರತವು ಶೇ. 100ರಷ್ಟು ಕೋವಿಡ್-19 ಗುಣಮುಖ ಪ್ರಮಾಣ ಕಂಡಿದೆ.

ದೇಶದಲ್ಲಿ ಈಗಾಗಲೇ ಕೊರೊನಾವೈರಸ್ ಸೋಂಕಿನಿಂದ ಬರೋಬ್ಬರಿ 50 ಲಕ್ಷಕ್ಕೂ ಹೆಚ್ಚು ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇದು ಒಟ್ಟು ಸೋಂಕಿತರ ಪ್ರಕರಣಗಳಲ್ಲಿ ಶೇ. 82ಕ್ಕಿಂತ ಹೆಚ್ಚು ಜನರು ಚೇತರಿಸಿಕೊಂಡಿದ್ದು, ಕಳೆದ ತಿಂಗಳಲ್ಲಿ ಇದರ ಪ್ರಮಾಣವು ಶೇ. 100 ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿತರಿಗಿಂತ ಬಿಡುಗಡೆಯಾದವರ ಸಂಖ್ಯೆ ಹೆಚ್ಚುರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿತರಿಗಿಂತ ಬಿಡುಗಡೆಯಾದವರ ಸಂಖ್ಯೆ ಹೆಚ್ಚು

ದೇಶದಲ್ಲಿ ಒಟ್ಟು 61 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 50 ಲಕ್ಷ ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು (10 ಲಕ್ಷಕ್ಕಿಂತ ಕಡಿಮೆ) ಒಟ್ಟು ಪ್ರಕರಣಗಳಲ್ಲಿ ಒಂದು ಸಣ್ಣ ಪ್ರಮಾಣ (1/5 ಕ್ಕಿಂತ ಕಡಿಮೆ) ಹೊಂದಿದೆ ಎಂದಿದೆ.

Covid-19: India Witnessed Close 100 Percent Increase In Recoveries In Past Month

ಪ್ರಸ್ತುತ ಸಕ್ರಿಯ ಪ್ರಕರಣಗಳು 10 ಲಕ್ಷಕ್ಕಿಂತ ಕಡಿಮೆ ಇದ್ದು, 95 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸೆಪ್ಟೆಂಬರ್ 17ರಂದು ದೇಶದಲ್ಲಿ 40,25,079 ಮಂದಿ ಗುಣಮುಖರಾಗಿದ್ದರು, ಇದು ಸೆಪ್ಟೆಂಬರ್ 28ಕ್ಕೆ 50 ಲಕ್ಷ ದಾಟಿದೆ (50,16,520).

English summary
India has witnessed close to 100% increase in recoveries in the past month. More than 82% of total cases (exceeding 50 lakhs) recovered says Ministry of Health & Family Welfare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X