• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂದು ರಾತ್ರಿ 8ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

|

ನವದೆಹಲಿ, ಮಾರ್ಚ್ 24: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್-19 ಕುರಿತು ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಕೋವಿಡ್-19 ರ ಭೀತಿಗೆ ಸಂಬಂಧಿಸಿದ ಪ್ರಮುಖ ಅಂಶಗಳ ಕುರಿತು 2020 ರ ಮಾರ್ಚ್ 24 ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ" ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಪ್ರಧಾನಿ ಮಾಡಲಿರುವ ಎರಡನೇ ಭಾಷಣ ಇದಾಗಲಿದೆ. ಈ ಹಿಂದಿನ ಭಾಷಣದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಅಂತರದ ಮಹತ್ವದ ಬಗ್ಗೆ ವಿವರಿಸಿದ್ದರು. ಜೊತೆಗೆ ಜನತಾ ಕರ್ಫ್ಯೂ ಆಚರಣೆಗೆ ಕರೆ ನೀಡಿದ್ದರು. ಹಾಗೇ, ಭಾನುವಾರ ಸಂಜೆ 5 ಗಂಟೆಗೆ ಜನರು ತಮ್ಮ ಮನೆಯಲ್ಲೇ ವೈದ್ಯಕೀಯ ಸಿಬ್ಬಂದಿಯ ಮೆಚ್ಚುಗೆಯ ಚಪ್ಪಾಳೆ ತಟ್ಟುವಂತೆ ಪ್ರಧಾನಿ ಕೋರಿದ್ದರು.

English summary
Covid 19: PM Narendra Modi to address Nation at 8 PM Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X