ಭಾರತದಲ್ಲಿ 100ರಲ್ಲಿ 74 ಮಂದಿ ಕೊರೊನಾ ಸೋಂಕಿನಿಂದ ಗುಣಮುಖ
ನವದೆಹಲಿ, ಆಗಸ್ಟ್ 20: ಭಾರತದಲ್ಲಿ 100 ಮಂದಿ ಕೊರೊನಾ ಸೋಂಕಿತರಲ್ಲಿ 74 ಮಂದಿ ಗುಣಮುಖರಾಗಿದ್ದಾರೆ.
Recommended Video
ಭಾರತದಲ್ಲಿ ಒಟ್ಟು 28 ಲಕ್ಷ ಕೊರೊನಾ ಸೋಂಕಿತರಿದ್ದಾರೆ. ಗುರುವಾರಕ್ಕೆ ಕೊರೊನಾದಿಂದ ಗುಣಮುಖರಾಗಿರುವವರ ಸಂಖ್ಯೆ 20,96,664 ಮಂದಿ ಇದ್ದಾರೆ. ಚೇತರಿಕೆ ಪ್ರಮಾಣ ಶೇ,73.91ರಷ್ಟಿದೆ.
6,86,395 ಸಕ್ರಿಯ ಪ್ರಕರಣಗಳಲ್ಲಿ, ಶೇ.0.28 ಮಂದಿ ಮಾತ್ರ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ರವಾನಿಸಿದೆ. ಶೇ.1.92 ಮಂದಿ ಐಸಿಯು ಹಾಗೂ ಶೇ.2.62ರಷ್ಟು ಮಂದಿ ಆಕ್ಸಿಜನ್ ಸಪೋರ್ಟ್‌ನಲ್ಲಿದ್ದಾರೆ. ಸಾವಿನ ಸಂಖ್ಯೆ ಶೇ.1.90 ಅಷ್ಟು ಕಡಿಮೆಯಾಗಿದೆ.

ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೊಂದು ದಾಖಲೆಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 69652 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 977 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 53866ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 2836926ಕ್ಕೆ ಏರಿಕೆಯಾಗಿದೆ. ಈ ಪೈಕಿ 2096665 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 686395 ಸಕ್ರಿಯ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.












Click it and Unblock the Notifications