10,12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಲು ವಿದ್ಯಾರ್ಥಿಗಳ ಒತ್ತಾಯ
ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ 10 ಹಾಗೂ 12 ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಈ ಕುರಿತು 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಿ ಅಥವಾ ಪರೀಕ್ಷೆಯನ್ನು ಸ್ಥಗಿತಗೊಳಿಸಿ ಎಂದು ಮನವಿ ಮಾಡಿದ್ದಾರೆ.
ಹ್ಯಾಶ್‌ಟ್ಯಾಗ್ cancelboardexams2021 ಎಂಬುದು ಕಳೆದ ಎರಡು ದಿನಗಳಿಂದ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‌ಇ), ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್( ಸಿಐಎಸ್‌ಸಿಇ)ಯು ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಬೇಕಾದ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದೇವೆ, ಹಾಗೆಯೇ ಕೋವಿಡ್ 19 ಮಾರ್ಗಸೂಚಿಗಳೆಲ್ಲವನ್ನೂ ಅಳವಡಿಸಿಕೊಳ್ಳುತ್ತೇವೆ ಎಂದು ಹೇಳಿವೆ.

ಭಾರತದ ಪರಿಸ್ಥಿತಿ ದಿನದಿಂದ ದಿನಕ್ಕೆ ಕೆಟ್ಟದಾಗುತ್ತಿದೆ. ಆಗ ಕೊರೊನಾ ಕಡಿಮೆ ಇದ್ದಾಗ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು, ಆದರೆ ಈಗ ಕೊರೊನಾ ಸೋಂಕು ಹೆಚ್ಚಿದ್ದರೂ ಶಾಲೆಗಳನ್ನು ತೆರೆಯುವ ಕುರಿತು ಸರ್ಕಾರ ಮಾತನಾಡುತ್ತಿದೆ.
ಹೀಗಾಗಿ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಶಿಕ್ಷಣ ಸಚಿವರಿಗೆ ಒತ್ತಾಯಿಸುತ್ತಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈಗಾಗಲೇ ಕೊರೊನಾದಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ, ಆನ್‌ಲೈನ್ ತರಗತಿ ರೀತಿಯಲ್ಲೇ ಆನ್‌ಲೈನ್ ಪರೀಕ್ಷೆಯನ್ನು ಕೂಡ ಮಾಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.












Click it and Unblock the Notifications