ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10,12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಲು ವಿದ್ಯಾರ್ಥಿಗಳ ಒತ್ತಾಯ

|
Google Oneindia Kannada News

ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ 10 ಹಾಗೂ 12 ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕುರಿತು 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಿ ಅಥವಾ ಪರೀಕ್ಷೆಯನ್ನು ಸ್ಥಗಿತಗೊಳಿಸಿ ಎಂದು ಮನವಿ ಮಾಡಿದ್ದಾರೆ.

1ರಿಂದ 9ನೇ ತರಗತಿ ವಾರ್ಷಿಕ ಪರೀಕ್ಷೆ ಕುರಿತು ಸಚಿವ ಸುರೇಶ್ ಕುಮಾರ್ ಮಾಹಿತಿ1ರಿಂದ 9ನೇ ತರಗತಿ ವಾರ್ಷಿಕ ಪರೀಕ್ಷೆ ಕುರಿತು ಸಚಿವ ಸುರೇಶ್ ಕುಮಾರ್ ಮಾಹಿತಿ

ಹ್ಯಾಶ್‌ಟ್ಯಾಗ್ cancelboardexams2021 ಎಂಬುದು ಕಳೆದ ಎರಡು ದಿನಗಳಿಂದ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‌ಇ), ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್( ಸಿಐಎಸ್‌ಸಿಇ)ಯು ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಬೇಕಾದ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದೇವೆ, ಹಾಗೆಯೇ ಕೋವಿಡ್ 19 ಮಾರ್ಗಸೂಚಿಗಳೆಲ್ಲವನ್ನೂ ಅಳವಡಿಸಿಕೊಳ್ಳುತ್ತೇವೆ ಎಂದು ಹೇಳಿವೆ.

 COVID-19: Students Of Classes 10, 12 Want Board Exams Cancelled

ಭಾರತದ ಪರಿಸ್ಥಿತಿ ದಿನದಿಂದ ದಿನಕ್ಕೆ ಕೆಟ್ಟದಾಗುತ್ತಿದೆ. ಆಗ ಕೊರೊನಾ ಕಡಿಮೆ ಇದ್ದಾಗ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು, ಆದರೆ ಈಗ ಕೊರೊನಾ ಸೋಂಕು ಹೆಚ್ಚಿದ್ದರೂ ಶಾಲೆಗಳನ್ನು ತೆರೆಯುವ ಕುರಿತು ಸರ್ಕಾರ ಮಾತನಾಡುತ್ತಿದೆ.

Recommended Video

ಜೂನ್ 21 ರಿಂದ SSLC ಪರೀಕ್ಷೆ ಹಾಗೂ ಮೇ 24 ರಿಂದ PUC ಪರೀಕ್ಷೆ | Oneindia Kannada

ಹೀಗಾಗಿ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಶಿಕ್ಷಣ ಸಚಿವರಿಗೆ ಒತ್ತಾಯಿಸುತ್ತಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈಗಾಗಲೇ ಕೊರೊನಾದಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ, ಆನ್‌ಲೈನ್ ತರಗತಿ ರೀತಿಯಲ್ಲೇ ಆನ್‌ಲೈನ್ ಪರೀಕ್ಷೆಯನ್ನು ಕೂಡ ಮಾಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

English summary
Amid a surge in COVID-19 cases, over one lakh students of classes 10 and 12 have signed petitions urging the government to either cancel board exams scheduled to be held in May or conduct them in online mode.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X