ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ಕೊರೊನಾ ಲಸಿಕೆ ಬಳಕೆ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

|
Google Oneindia Kannada News

ನವದೆಹಲಿ, ಅಕ್ಟೋಬರ್ 29: ಎರಡು ಕೊರೊನಾ ಲಸಿಕೆಗಳ ಬಳಕೆ ಕುರಿತು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. ರೆಮ್‌ಡೆಸಿವಿರ್, ಫೆವಿಪಿರಾವಿರ್ ಔಷಧಗಳನ್ನು ಯಾವುದೇ ಅನುಮತಿ ಇಲ್ಲದೇ ಕೊವಿಡ್ 19 ಸಾಂಕ್ರಾಮಿಕ ರೋಗದ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.

ಈ ಪ್ರಕರಣದ ಅರ್ಜಿದಾರ ಹಾಗೂ ವಕೀಲ ಎಂ.ಎಲ್ ಶರ್ಮಾ , ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡು, ಅ.15ರ ವಿಶ್ವ ಆರೋಗ್ಯ ಸಂಸ್ಥೆ ವರದಿಯನ್ನು ಉಲ್ಲೇಖಿಸಿ, ಈ ಎರಡು ಔಷಧಗಳನ್ನು ಕೊವಿಡ್ 19 ಚಿಕಿತ್ಸೆಗೆ ಬಳಸಬಹುದೆಂದು ಎಲ್ಲಿಯೂ ಅಧಿಕೃತವಾಗಿ ಹೇಳಿಲ್ಲ.

ಭಾರತದಲ್ಲಿ 8 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಒಟ್ಟು ಪ್ರಕರಣಭಾರತದಲ್ಲಿ 8 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಒಟ್ಟು ಪ್ರಕರಣ

ಈ ಎರಡು ಔಷಧಗಳನ್ನು ಕೊವಿಡ್ 19 ಚಿಕಿತ್ಸೆಗೆ ಬಳಸುವ ಕುರಿತು ಎಲ್ಲೂ ಅಧಿಕೃತ ಮಾಹಿತಿ ಇಲ್ಲ ಎಂಬ ವಿಚಾರ ಕೇಂದ್ರ ಸರ್ಕಾರಕ್ಕೆ ತಿಳಿಸುವ ಸಂಬಂಧ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

COVID-19: Supreme Court Seeks Centres Reply On Plea Claiming No Approval For Remdesivir

ಈ ವಿಷಯ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ, ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ 49881 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 56,480 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 517 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
The Supreme Court today sought response from the Centre on a plea alleging that two medicines Remdesivir and Favipiravir, are being used for treatment of COVID-19 without approval.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X