ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಮಾರ್ಚ್ ವೇಳೆಗೆ 12 ವರ್ಷ ಮೇಲ್ಪಟ್ಟವರಿಗೂ ಕೊವಿಡ್-19 ಲಸಿಕೆ

|
Google Oneindia Kannada News

ನವದೆಹಲಿ, ಜನವರಿ 17: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಮಕ್ಕಳಿಗೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್ ತಿಂಗಳಿನಿಂದ ಮಕ್ಕಳಿಗೂ ಲಸಿಕೆ ನೀಡುವಂತೆ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ರೋಗನಿರೋಧಕ ಗುಂಪಿನ (NTAGEI) ಅಧ್ಯಕ್ಷ ಡಾ ಎನ್‌ಕೆ ಅರೋರಾ ಸಲಹೆ ನೀಡಿದ್ದಾರೆ.

ಮಾರ್ಚ್ ತಿಂಗಳಿನಿಂದ 12-14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೊವಿಡ್19 ವಿರುದ್ಧ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಇಂದಿನವರೆಗೆ 157 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಮಹಾನಗರ, ನಗರಗಳಿಂದ ಹಳ್ಳಿಗಳಿಗೆ ಹರಡಿದ ಕೊರೊನಾವೈರಸ್!ಭಾರತದಲ್ಲಿ ಮಹಾನಗರ, ನಗರಗಳಿಂದ ಹಳ್ಳಿಗಳಿಗೆ ಹರಡಿದ ಕೊರೊನಾವೈರಸ್!

ಕಳೆದ ಡಿಸೆಂಬರ್ 25ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜನವರಿ 3ರಿಂದ 15-18 ವಯೋಮಾನದ ಮಕ್ಕಳಿಗೆ ಕೊವಿಡ್-19 ಲಸಿಕೆ ನೀಡಲು ಆರಂಭಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದರು. ಭಾನುವಾರದ ವೇಳೆಗೆ 15-18 ವಯೋಮಾನದ 3.5 ಕೋಟಿ ಮಂದಿಗೆ ಕೊವಿಡ್ -19 ಲಸಿಕೆಗಳ ಮೊದಲ ಡೋಸ್ ಅನ್ನು ಸ್ವೀಕರಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

Covid-19 Vaccinating 12-14 year olds against Covid by March in India: NTAGI Chief

ಭಾರತದಲ್ಲಿ 12 ವರ್ಷ ಮೇಲ್ಪಟ್ಟವರಿಗೆ ಯಾವ ಲಸಿಕೆ?:

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸಬೇಕಿದೆ. ಇದರ ಮಧ್ಯೆ ಮಾರ್ಚ್ ತಿಂಗಳಿನಿಂದ 12 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ರೋಗನಿರೋಧಕ ಗುಂಪಿನ (NTAGEI) ಅಧ್ಯಕ್ಷ ಡಾ ಎನ್‌ಕೆ ಅರೋರಾ ತಿಳಿಸಿದ್ದಾರೆ.

ಭಾರತದಲ್ಲಿ 12 ವರ್ಷ ಮೇಲ್ಪಟ್ಟವರಿಗಾಗಿ ಎರಡು ಕೊವಿಡ್-19 ಲಸಿಕೆಗಳಿಗೆ ಇದುವರೆಗೂ ಅನುಮೋದನೆ ನೀಡಲಾಗಿದೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವಾಕ್ಸಿನ್ ಮತ್ತು ಝೈಡಸ್ ಕ್ಯಾಡಿಲಾ ಅವರ ZyCoV-D ಲಸಿಕೆಯನ್ನು ಈ ವಯೋಮಾನದವರಿಗೆ ನೀಡಲಾಗುತ್ತದೆ.

ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ದೇಶದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕಿನ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 3ರಿಂದ 15 ರಿಂದ 17 ವರ್ಷದ ಮಕ್ಕಳಿಗೂ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ಆರಂಭಿಸಲಾಗಿದೆ. ಇದರ ಜೊತೆಗೆ ಜನವರಿ 10ರಿಂದ ದೇಶದ ಆರೋಗ್ಯ ಕಾರ್ಯಕರ್ತರು ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

English summary
Covid-19 Vaccinating 12-14 year olds against Covid by March in India: NTAGI Chief Dr NK Arora.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X