ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದ ನರೇಂದ್ರ ಮೋದಿ

|
Google Oneindia Kannada News

ನವದೆಹಲಿ, ಜನವರಿ 04: ಭಾರತೀಯ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊವಿಡ್ 19 ಸಾಂಕ್ರಾಮಿಕ ರೋಗಕ್ಕೆ ಮೇಡ್ ಇನ್ ಇಂಡಿಯಾ ಲಸಿಕೆಗಳನ್ನು ತಯಾರಿಸಲು ಭಾರತೀಯ ವಿಜ್ಞಾನಿಗಳು ಸಾಕಷ್ಟು ಶ್ರಮಪಟ್ಟು ಯಶಸ್ವಿಯಾಗಿದ್ದಾರೆ.

ಸಮರ್ಪಕ ದಾಖಲೆಗೂ ಮುನ್ನ ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ: ವಿಜ್ಞಾನಿಗಳ ಆಕ್ಷೇಪಸಮರ್ಪಕ ದಾಖಲೆಗೂ ಮುನ್ನ ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ: ವಿಜ್ಞಾನಿಗಳ ಆಕ್ಷೇಪ

ಇದರಿಂದ ಇಡೀ ದೇಶವೇ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುವಂತಾಗಿದೆ. ಜಾಗತಿಕ ನಾವೀನ್ಯತೆ ಶ್ರೇಯಾಂಕದಲ್ಲಿ ಅಗ್ರ 50ರಲ್ಲಿ ಭಾರತ ಗುರುತಿಸಿಕೊಂಡಿದೆ. ದೇಶದಲ್ಲಿ ಉದ್ಯಮ ಹಾಗೂ ಸಂಸ್ಥೆಗಳ ನಡುವಿನ ಸಹಯೋಗವನ್ನು ಬಲಪಡಿಸಲಾಗುತ್ತಿದೆ ಎಂದರು.

Covid-19 Vaccination Programme Set To Begin In India, Country Proud Of Its Scientists

ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮೋದಿ, ಜಾಗತಿಕ ಬೇಡಿಕೆ ಮಾತ್ರವಲ್ಲದೆ ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಜಾಗತಿಕ ಸ್ವೀಕಾರವೂ ಇದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಗುಣಮಟ್ಟ ಹಾಗೂ ವಿಶ್ವಾರ್ಹತೆಯ ಆಧಾರದಲ್ಲಿ ನಾವು ಬ್ರ್ಯಾಂಡ್ ಇಂಡಿಯಾವನ್ನು ಬಲಪಡಿಸುವ ಅಗತ್ಯವಿದೆ ಎಂದರು.

ಯಾವುದೇ ಸಂಶೋಧನೆಯ ಪ್ರಭಾವವು ವಾಣಿಜ್ಯ ಹಾಗೂ ಸಾಮಾಜಿಕವಾಗಿದ್ದು, ನಮ್ಮ ತಿಳಿವಳಿಕೆಯನ್ನು ವಿಸ್ತರಿಸುತ್ತದೆ ಎಂದರು.

ಮಾರಕ ಕೊರೊನಾ ವೈರಸ್ ಸೋಂಕಿತರಿಗೆ ತುರ್ತು ಬಳಕೆಗಾಗಿ ಕೋವಿಶೀಲ್ಡ್ ಲಸಿಕೆಗೆ ಅನುಮತಿ ದೊರೆತ ಬೆನ್ನಲ್ಲೇ ಕೋವಿಶೀಲ್ಡ್ ಲಸಿಕೆ ತಯಾರಿಕೆ ಮಾಡುವ ಸಂಬಂಧ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮತಿ ನೀಡಿದೆ.

ಈ ನಿನ್ನೆಯಷ್ಟೇ ಡಿಸಿಜಿಐ ಆಕ್ಸ್‌ಫರ್ಡ್ ನ ಕೊರೊನಾ ವೈರಸ್ ಲಸಿಕೆ ಮತ್ತು ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆಗಳನ್ನು ತುರ್ತುಬಳಕೆಗೆ ನೀಡಲು ಅನುಮತಿ ನೀಡಿದ 24 ಗಂಟೆಗಳೊಳಗೆ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಕೋವಿಶೀಲ್ಜ್ ಲಸಿಕೆ ತಯಾರಿಕೆ ಮಾಡಲು ಅನುಮತಿ ದೊರೆತಿದೆ.

ಆಕ್ಸ್‌ಫರ್ಡ್ ಸಂಸ್ಥೆ ಅಭಿವೃದ್ಧಿಪಡಿಸಿದ ChAdOx1 nCov-2019 ಕೊರೊನಾವೈರಸ್ ಲಸಿಕೆ 56-69 ವರ್ಷ ವಯಸ್ಸಿನ ಆರೋಗ್ಯವಂತ ವಯಸ್ಕರಲ್ಲಿ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ರೋಗನಿರೋಧಕ ಸಾಮರ್ಥ್ಯವನ್ನು ಪ್ರಚೋದಿಸುತ್ತದೆ ಎಂದು ಪುಣೆ ಮೂಲದ ಕಂಪನಿ ಈ ಹಿಂದೆ ತಿಳಿಸಿತ್ತು.

Recommended Video

ಬೆಂಗಳೂರು: ಬಿಬಿಎಂಪಿ ತೆರಿಗೆ ಹೊರೆ ನೀತಿಗೆ ಖಂಡನೆ, ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ ರ್ಯಾಲಿ | Oneinda Kannada

English summary
Prime minister Narendra Modi Says The Indian scientists have been successful in coming up with two 'made in India' Covid-19 vaccines. The country is proud of its scientists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X