covishield booster dose price : ಏಪ್ರಿಲ್ 10ರಿಂದ ನೀವು ಪಡೆಯುವ ಬೂಸ್ಟರ್ ಡೋಸ್ ಲಸಿಕೆ ಬೆಲೆ ಎಷ್ಟು?

ನವದೆಹಲಿ, ಏಪ್ರಿಲ್ 8: ಭಾರತದಲ್ಲಿ ಏಪ್ರಿಲ್ 10ರಿಂದ ಖಾಸಗಿ ಕೋವಿಡ್ -19 ಲಸಿಕೆ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ವಿತರಣೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಘೋಷಿಸಿದೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಿಇಒ ಆದರ್ ಪೂನಾವಲ್ಲ ಅವರು ಎಲ್ಲಾ ವಯಸ್ಕರಿಗೆ ಒಂದು ಡೋಸ್ ಕೋವಿಶೀಲ್ಡ್ ಮುನ್ನೆಚ್ಚರಿಕೆ (ಬೂಸ್ಟರ್) ಲಸಿಕೆಗೆ 600 ರೂಪಾಯಿ ದರ ನಿಗದಿಪಡಿಸಲಾಗಿದ್ದು, ಇದರ ಜೊತೆಗೆ ತೆರಿಗೆಗಳನ್ನು ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಇದರ ಮಧ್ಯೆ Covovax ಅನ್ನು ಔಪಚಾರಿಕವಾಗಿ ಬೂಸ್ಟರ್ ಶಾಟ್ ಎಂದು ಇನ್ನೂ ಘೋಷಣೆ ಆಗಿಲ್ಲ. ಅನುಮೋದನೆ ನಂತರದಲ್ಲಿ ತೆರಿಗೆ ಹೊರತಾಗಿ ಈ ಲಸಿಕೆಗೆ 900 ರೂಪಾಯಿ ದರ ನಿಗದಿಗೊಳಿಸಲಾಗುವುದು. ಈ ಲಸಿಕೆಯನ್ನು ಪ್ರಸ್ತುತ ತುರ್ತು ಸಂದರ್ಭಗಳಲ್ಲಿ ವಯಸ್ಕರಿಗೆ ಮತ್ತು 12-17 ವಯಸ್ಸಿನವರಿಗೆ ನೀಡುವುದಕ್ಕೆ ಮಾತ್ರ ಬಳಕೆ ಮಾಡಲಾಗುತ್ತಿದೆ," ಎಂದು ಅವರು ತಿಳಿಸಿದ್ದಾರೆ.

COVID-19 Vaccine: Covishield Booster Shots to Be Priced at Rs 600 Plus Taxes, Says Adar Poonawalla

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ:

ಭಾರತವು 2022ರ ಜನವರಿಯಲ್ಲಿ ಆರೋಗ್ಯ ವೃತ್ತಿಪರರು, ಮೊದಲ ಶ್ರೇಣಿ ಕಾರ್ಯಕರ್ತರು ಮತ್ತು ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡುವುದಕ್ಕೆ ಪ್ರಾರಂಭಿಸಲಾಗಿತ್ತು. ಕಳೆದ ಮಾರ್ಚ್‌ನಲ್ಲಿ ಕೇಂದ್ರವು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಲಸಿಕೆ ವಿತರಿಸುವುದಕ್ಕೆ ಅವಕಾಶ ನೀಡಲಾಗಿತ್ತು. ಈ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ಅನ್ನು ಸರ್ಕಾರವು ಉಚಿತವಾಗಿ ನೀಡಲಾಗುತ್ತದೆ. ಆದರೆ ಏಪ್ರಿಲ್ 10ರಂದು ಪ್ರಾರಂಭವಾಗಲಿರುವ ವಯಸ್ಕರ ವಿಷಯದಲ್ಲಿ ಹೀಗೆ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡಲಾಗುವುದಿಲ್ಲ.

2ನೇ ಡೋಸ್ ಪಡೆದು 9 ತಿಂಗಳ ನಂತರ ಬೂಸ್ಟರ್ ಡೋಸ್:

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಘೋಷಿಸಿದೆ. 18 ವರ್ಷ ಮೇಲ್ಪಟ್ಟ ನೀವು ಎರಡನೇ ಡೋಸ್ ಪಡೆದು 9 ತಿಂಗಳು ಆಗಿದ್ದರೆ, ಬೂಸ್ಟರ್ ಡೋಸ್ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತೀರಿ.

COVID-19 Vaccine: Covishield Booster Shots to Be Priced at Rs 600 Plus Taxes, Says Adar Poonawalla

ಭಾರತದಲ್ಲಿ ಶೇ.96ರಷ್ಟು ಮಂದಿಗೆ ಮೊದಲ ಡೋಸ್:

ದೇಶದಲ್ಲಿ 15 ವರ್ಷ ಮೇಲ್ಪಟ್ಟವರಲ್ಲಿ ಶೇ.96ರಷ್ಟು ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ 15 ವರ್ಷ ಮೇಲ್ಪಟ್ಟ ಶೇ.83ರಷ್ಟು ಫಲಾನುಭವಿಗಳು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಾರಂಭವಾಗಿ 447 ದಿನಗಳೇ ಕಡೆದಿದ್ದು, ಇದುವರೆಗೂ 185 ಕೋಟಿ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೂ ಎಷ್ಟು ಜನರಿಗೆ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗುತ್ತಿರುವುದರ ಮಧ್ಯೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ದೇಶದಲ್ಲಿ ಇದುವರೆಗೂ 185,36,60,641 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಈ ನಡುವೆ 99,19,34,228 ಮಂದಿಗೆ ಮೊದಲ ಡೋಸ್, 83,76,84,372 ಜನರಿಗೆ ಎರಡನೇ ಡೋಸ್ ಹಾಗೂ 2,40,42,041 ಬೂಸ್ಟರ್ ಡೋಸ್ ವಿತರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+