ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ, ಲಭ್ಯತೆಯ ಸಂಪೂರ್ಣ ಮಾಹಿತಿ

ನವದೆಹಲಿ, ಜುಲೈ 30: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಯಿತೇ ಎಂಬ ಅನುಮಾನ ಹೆಚ್ಚುತ್ತಿದೆ. ಏಕೆಂದರೆ ಕಳೆದ ಒಂದೇ ದಿನ 44,230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 42,360 ಸೋಂಕಿತರು ಗುಣಮುಖರಾಗಿದ್ದರೆ, 555 ಜನರು ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 196 ದಿನಗಳಲ್ಲಿ ಈವರೆಗೂ 46 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 44,38,901 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 46,06,56,534 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,15,72,344ಕ್ಕೆ ಏರಿಕೆಯಾಗಿದ್ದು, 3,07,43,972 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ 4,23,217 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, 4,05,155 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಹಂತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ವಯಸ್ಕರಿಗೆ ಆದ್ಯತೆ ನೀಡುತ್ತಿರುವುದರ ಹೊರತಾಗಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ. ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು ಮತ್ತು ಕೇಂದ್ರದಿಂದ ಪೂರೈಸಿದ ಒಟ್ಟು ಲಸಿಕೆ ಪ್ರಮಾಣ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾಕಿ ಉಳಿದುಕೊಂಡಿರುವ ಲಸಿಕೆ ಪ್ರಮಾಣದ ಕುರಿತು ಒಂದು ವಿಸ್ತೃತ ಮಾಹಿತಿಗಾಗಿ ಮುಂದೆ ಓದಿ.

Covid-19 Vaccine Distribution And Availability Details of Vaccine in India


18-44 ವಯೋಮಾನದವರಿಗೆ ಲಸಿಕೆ ವಿತರಣೆಗೆ ಆದ್ಯತೆ:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಬುಧವಾರ ಒಂದೇ ದಿನ 18 ರಿಂದ 44 ವಯೋಮಾನದ 20,96,446 ಜನರಿಗೆ ಮೊದಲ ಡೋಸ್ ಹಾಗೂ 3,41,500 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 15,17,27,430 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 80,31,011 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ವಯಸ್ಕರಿಗೆ ಅತಿಹೆಚ್ಚು ಲಸಿಕೆ ನೀಡಿರುವ ರಾಜ್ಯಗಳ ಪಟ್ಟಿ:

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ:

2021ರ ಜುಲೈ 30ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 48,03,97,080 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 48,03,97,080

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 71,16,720

* ಬಳಕೆ ಆಗಿರುವ ಲಸಿಕೆ ಪ್ರಮಾಣ - 45,27,93,441

* ಕೊವಿಡ್-19 ಲಸಿಕೆಯ ಲಭ್ಯತೆ - 2,92,65,015

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+