ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಮಾರುಕಟ್ಟೆಯಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಮಾರಾಟಕ್ಕೆ ಶಿಫಾರಸ್ಸು

|
Google Oneindia Kannada News

ನವದೆಹಲಿ, ಜನವರಿ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಲಸಿಕೆ ಮಾರುಕಟ್ಟೆಯಲ್ಲಿ ಸಿಗುವ ದಿನಗಳು ದೂರ ಉಳಿದಿಲ್ಲ. ದೇಶದ ಮಾರುಕಟ್ಟೆಯಲ್ಲಿ ಕೊವಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆಯನ್ನು ಮುಕ್ತಗೊಳಿಸುವ ಕುರಿತು ಕೇಂದ್ರ ಔಷಧ ಪ್ರಾಧಿಕಾರದ ಪರಿಣಿತ ಸಮಿತಿಯು ಶಿಫಾರಸ್ಸು ಮಾಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆಯು ಸುಲಭವಾಗಿ ಲಭ್ಯವಾಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ತಜ್ಞರ ಸಮಿತಿಯು ಶಿಫಾರಸ್ಸು ನೀಡಿದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್‌ನ ಶಿಫಾರಸುಗಳನ್ನು ಉನ್ನತ ಔಷಧ ನಿಯಂತ್ರಕ ಡಿಜಿಸಿಐಗೆ ಕಳುಹಿಸಲಾಗಿದೆ.

ZEE News Opinion Poll: ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರಿಗೆ ಮತದಾರರ ಮಣೆ?ZEE News Opinion Poll: ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರಿಗೆ ಮತದಾರರ ಮಣೆ?

ಭಾರತದಲ್ಲಿ 2021ರ ಜನವರಿ 16ರಂದು ಮೊದಲ ಬಾರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ಆರಂಭಿಸಲಾಯಿತು. ಅಂದು ಮೊದಲಿಗೆ ಕೊವಿಶೀಲ್ಡ್ ಲಸಿಕೆಯ ವಿತರಣೆ ಮಾಡಲಾಗುತ್ತಿದ್ದು, ತದನಂತರದಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲು ಆರಂಭಿಸಲಾಯಿತು.

Covid-19 Vaccine: Expert Panel Cleared Market Approval to Covishield, Covaxin in India


ಸಿಡಿಎಸ್‌ಸಿಒ ಟ್ವೀಟ್ ಸಂದೇಶ:

"ಸಿಡಿಎಸ್‌ಸಿಒದ ಎಸ್‌ಇಸಿಯು ತುರ್ತು ಸಂದರ್ಭಗಳಲ್ಲಿ ನಿರ್ಬಂಧಿತ ಬಳಕೆಯಿಂದ ಕೊವಿಶೀಲ್ಡ್ ಮತ್ತು ಕೊವಾಕ್ಸಿನ್ ಸ್ಥಿತಿಯನ್ನು ನವೀಕರಿಸಲು ಶಿಫಾರಸು ಮಾಡಿದೆ. ವಯಸ್ಕ ಜನಸಂಖ್ಯೆಯಲ್ಲಿ ಹೊಸ ಔಷಧಿ ಅನುಮತಿಯನ್ನು ನೀಡಲು, ಡಿಸಿಜಿಐ ಶಿಫಾರಸುಗಳನ್ನು ಮೌಲ್ಯಮಾಪನ ಮಾಡುತ್ತದೆ ಹಾಗೂ ಅದರ ನಿರ್ಧಾರವನ್ನು ನೀಡುತ್ತದೆ," ಎಂದು ನಿಯಂತ್ರಕ ಸಂಸ್ಥೆ ಟ್ವೀಟ್ ಮಾಡಿದೆ.

ಕೊವಿಶೀಲ್ಡ್:

ಪುಣೆ ಮೂಲದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಈ ಕೊವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತದೆ.

ಕೊವ್ಯಾಕ್ಸಿನ್:

ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಈ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸುತ್ತದೆ.

ದೇಶದಲ್ಲಿ 158.88 ಕೋಟಿ ಡೋಸ್ ಲಸಿಕೆ ವಿತರಣೆ:

ದೇಶದಲ್ಲಿ ಇದುವರೆಗೂ 158.88 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 76,35,229 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಜನವರಿ 18ರ ಅಂಕಿ-ಅಂಶಗಳ ಪ್ರಕಾರ, 1,58,88,47,554 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಎಷ್ಟು ಹಂತಗಳಲ್ಲಿ ಕೊವಿಡ್-19 ಲಸಿಕೆ ವಿತರಣೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

Recommended Video

ಅಪರ್ಣಾ BJP ಸೇರ್ಪಡೆಯಿಂದ ನಮ್ಮ ಪಕ್ಷದ ಸಿದ್ಧಾಂತ ಅಲ್ಲೂ ಹರಡುತ್ತೆ ಎಂದ Akhilesh Yadav | Oneindia Kannada

ದೇಶದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕಿನ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 3ರಿಂದ 15 ರಿಂದ 17 ವರ್ಷದ ಮಕ್ಕಳಿಗೂ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ಆರಂಭಿಸಲಾಗಿದೆ. ಇದರ ಜೊತೆಗೆ ಜನವರಿ 10ರಿಂದ ದೇಶದ ಆರೋಗ್ಯ ಕಾರ್ಯಕರ್ತರು ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

English summary
Covid-19 Vaccine: Expert Panel Cleared Market Approval to Covishield, Covaxin in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X