ಸಿಹಿಸುದ್ದಿ: 500 ರಿಂದ 600 ರೂಪಾಯಿಗೆ ಕೊರೊನಾವೈರಸ್ ಲಸಿಕೆ!

ನವದೆಹಲಿ, ನವೆಂಬರ್.19: ಭಾರತೀಯರು ಕೊರೊನಾವೈರಸ್ ಸೋಂಕಿಗೆ ಲಸಿಕೆ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ. ಅಗ್ಗದ ದರದಲ್ಲಿ ಭಾರತೀಯರಿಗೆ ಕೊವಿಡ್-19 ಲಸಿಕೆಯನ್ನು ಒದಗಿಸಲಾಗುತ್ತದೆ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಅದರ್ ಪೂನಾವಾಲಾ ತಿಳಿಸಿದ್ದಾರೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಲ್ಪಟ್ಟ ಕೊರೊನಾವೈರಸ್ ಸೋಂಕಿನ ಲಸಿಕೆಯು ಭಾರತೀಯರಿಗೆ ಅತ್ಯಂತ ಅಗ್ಗದ ದರದಲ್ಲಿ ಸಿಗಲಿದೆ. ದೇಶದ ಸಾಮಾನ್ಯರಲ್ಲೇ ಸಾಮಾನ್ಯ ಜನರಿಗೆ ಕೇವಲ 500 ರಿಂದ 600 ರೂಪಾಯಿಗೆ ಕೊರೊನಾವೈರಸ್ ಲಸಿಕೆಯು ಸಿಗಲಿದೆ ಎಂದು ಪೂನಾವಾಲಾ ಮಾಹಿತಿ ನೀಡಿದ್ದಾರೆ.

ಯುನೈಟೆಡ್ ಕಿಂಗ್ ಡಮ್ ಸರ್ಕಾರಕ್ಕೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೊರೊನಾವೈರಸ್ ಲಸಿಕೆಯನ್ನು ತುರ್ತು ದೃಢೀಕರಿಸುವಂತೆ ಕೋರಲಾಗಿದೆ. ಆದರೆ ಈ ಪ್ರಕ್ರಿಯೆ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ನಾವೂ ಕೂಡಾ ಅದಕ್ಕಾಗಿ ಅರ್ಜಿ ಸಲ್ಲಿಸುತ್ತೇವೆ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಅದರ್ ಪೂನಾವಾಲಾ ಹೇಳಿದ್ದಾರೆ.

Covid-19 Vaccine News: Indian Peoples Will Get Covid-19 Vaccine In Rs.500 To 600


ವಿದೇಶಿ ಕಂಪನಿ ಜೊತೆಗೆ ಭಾರತೀಯ ಕಂಪನಿ ಒಪ್ಪಂದ:

ವಿದೇಶದಲ್ಲಿ ಹಲವು ಕಂಪನಿಗಳು ಕೊರೊನಾವೈರಸ್ ಲಸಿಕೆ ಸಂಶೋಧಿಸುವಲ್ಲಿ ತೊಡಗಿವೆ. ಭಾರತೀಯರಿಗೆ ಕೊರೊನಾವೈರಸ್ ಲಸಿಕೆಯನ್ನು ಒದಗಿಸುವ ಉದ್ದೇಶದಿಂದ ಕೆಲವು ಭಾರತೀಯ ಕಂಪನಿಗಳು ಕೂಡಾ ಅಂಥ ವಿದೇಶಿ ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿವೆ. ಉದಾಹರಣೆಗೆ, ಪುಣೆ ಮೂಲದ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿದ್ದು, ಇದರ ಜೊತೆಗೆ ಲಸಿಕೆ ತಯಾರಿಕೆ ಮಾಡುತ್ತಿದೆ. ಹೀಗಿದ್ದರೂ ಕೂಡಾ ಡಾ. ರೆಡ್ಡೀಸ್ ಅವರ ಪ್ರಯೋಗಾಲಯಗಳಲ್ಲಿ ವೈದ್ಯಕೀಯ ಪ್ರಯೋಗಗಳನ್ನು ನಡೆಸಲು ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ವಿತರಣೆಗೆ ಒಪ್ಪಂದ ಮಾಡಿಕೊಂಡಿದೆ.

ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಮ್ಮ ಲಸಿಕೆಗಳನ್ನು ತಯಾರಿಸಲು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಅಸ್ಟ್ರಾಜೆನಿಕಾ, ಕೊಡಾಜೆನಿಕ್ಸ್ ಮತ್ತು ನೊವಾವಾಕ್ಸ್‌ನೊಂದಿಗೆ ಮಾದರಿಯ ಲಸಿಕೆ ಸಂಶೋಧನೆಯಲ್ಲಿ ಸಹಭಾಗಿತ್ವವನ್ನು ಹೊಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+