ವಿಶೇಷ ವರದಿ: ಕೇಂದ್ರ ಪೂರೈಸಿದ ಕೊರೊನಾವೈರಸ್ ಲಸಿಕೆಯಲ್ಲಿ ಉಳಿದಿರುವುದೆಷ್ಟು?

ನವದೆಹಲಿ, ಜುಲೈ 21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಇದರ ಮಧ್ಯೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ಕೊರತೆ ಸೃಷ್ಟಿಯಾಗಿರುವ ಬಗ್ಗೆ ವರದಿಗಳು ಬರುತ್ತಿವೆ.

ದೇಶದಲ್ಲಿ ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 31,79,469 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಈವರೆಗೂ 41,52,25,632 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 186 ದಿನಗಳೇ ಕಳೆದು ಹೋಗಿವೆ. ಈವರೆಗೂ 41 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂಬುದರ ಕುರಿತು ಒಂದು ವಿಸ್ತೃತ ವರದಿಗಾಗಿ ಮುಂದೆ ಓದಿ.

ಉತ್ಪಾದನೆ ಕಂಪನಿಗಳಿಂದ ಶೇ.75ರಷ್ಟು ಲಸಿಕೆ ಖರೀದಿ

ಉತ್ಪಾದನೆ ಕಂಪನಿಗಳಿಂದ ಶೇ.75ರಷ್ಟು ಲಸಿಕೆ ಖರೀದಿ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

2021ರ ಜುಲೈ 20ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಎಷ್ಟು ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

ಪೂರೈಕೆಯಾದ ಲಸಿಕೆ ಪ್ರಮಾಣ 3,25,17,330
ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 53,38,210
ಬಳಕೆ ಆಗಿರುವ ಲಸಿಕೆ ಪ್ರಮಾಣ 40,36,44,231
ಕೊವಿಡ್-19 ಲಸಿಕೆಯ ಲಭ್ಯತೆ 2,88,73,099
ಕೊರೊನಾವೈರಸ್ ಲಸಿಕೆ ವಿತರಣೆಯ ನಾಲ್ಕು ಹಂತಗಳು

ಕೊರೊನಾವೈರಸ್ ಲಸಿಕೆ ವಿತರಣೆಯ ನಾಲ್ಕು ಹಂತಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

3 ರಾಜ್ಯಗಳಲ್ಲಿ 1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ

3 ರಾಜ್ಯಗಳಲ್ಲಿ 1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಅನುಮೋದನೆ ಪಡೆದಿರುವ ಕೊವಿಡ್-19 ಲಸಿಕೆ

ಭಾರತದಲ್ಲಿ ಅನುಮೋದನೆ ಪಡೆದಿರುವ ಕೊವಿಡ್-19 ಲಸಿಕೆ

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+