ಕೇಂದ್ರ ಸರ್ಕಾರ ಈವರೆಗೂ ರಾಜ್ಯಗಳಿಗೆ ನೀಡಿರುವ ಲಸಿಕೆ ಎಷ್ಟು?

ನವದೆಹಲಿ, ಜುಲೈ 22: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಸರಬರಾಜು ಮತ್ತು ಪೂರೈಕೆಯಲ್ಲಿ ಕೊರತೆ ಸೃಷ್ಟಿಯಾಗಿರುವ ಬಗ್ಗೆ ಹಲವು ರಾಜ್ಯಗಳು ಆರೋಪಿಸುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ ಎಷ್ಟು ಪ್ರಮಾಣದ ಲಸಿಕೆ ಪೂರೈಕೆ ಆಗಿದೆ ಎಂಬುದನ್ನು ಇಲ್ಲಿ ತಿಳಿಯೋಣ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 187 ದಿನಗಳೇ ಕಳೆದು ಹೋಗಿವೆ. ಈವರೆಗೂ 41.78 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 20,83,892 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 41,78,51,151 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂಬುದರ ಕುರಿತು ಮುಂದೆ ಓದಿ.

COVID-19 Vaccines : Over 43,79 crore vaccine doses provided to states and UTs so far, says Centre

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ

2021ರ ಜುಲೈ 20ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಎಷ್ಟು ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 43,79,78,900

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 7,00,000

* ಬಳಕೆ ಆಗಿರುವ ಲಸಿಕೆ ಪ್ರಮಾಣ - 40,59,77,410

* ಕೊವಿಡ್-19 ಲಸಿಕೆಯ ಲಭ್ಯತೆ - 3,20,01,490

ಉತ್ಪಾದನೆ ಕಂಪನಿಗಳಿಂದ ಶೇ.75ರಷ್ಟು ಲಸಿಕೆ ಖರೀದಿ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+