ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ 46.23 ಕೋಟಿ ಡೋಸ್ ಲಸಿಕೆ

ನವದೆಹಲಿ, ಜುಲೈ 28: ಭಾರತದಲ್ಲಿ ಕೊರೊನಾವೈರಸ್ ಲಸಿಕೆಗೆ ಕೊರತೆ ಸೃಷ್ಟಿಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 194 ದಿನಗಳೇ ಕಳೆದಿದ್ದು, ಈವರೆಗೂ 45 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 39,42,457 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 45,02,55,460 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

COVID-19 Vaccines : Over 46.23 crore vaccine doses provided to states and UTs so far, says Centre

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

2021ರ ಜುಲೈ 28ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 46,23,27,530 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 46,23,27,530

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,20,70,820

* ಬಳಕೆ ಆಗಿರುವ ಲಸಿಕೆ ಪ್ರಮಾಣ - 44,29,95,780

* ಕೊವಿಡ್-19 ಲಸಿಕೆಯ ಲಭ್ಯತೆ - 2,18,10,422

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+