ಭಾರತದಲ್ಲಿ 2021ರ ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ!
ನವದೆಹಲಿ, ಜುಲೈ 29: ಭಾರತದಲ್ಲಿ ಡಿಸೆಂಬರ್ ತಿಂಗಳಾಂತ್ಯದ ವೇಳೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವ ಗುರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಂದಿದೆ.
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆಗೆ ಕೊರತೆ ಸೃಷ್ಟಿಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ
2021ರ ಜುಲೈ 29ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 47,48,77,490 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 47,48,77,490
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 53,05,260
* ಬಳಕೆ ಆಗಿರುವ ಲಸಿಕೆ ಪ್ರಮಾಣ - 44,74,97,240
* ಕೊವಿಡ್-19 ಲಸಿಕೆಯ ಲಭ್ಯತೆ - 2,88,55,050












Click it and Unblock the Notifications