ಭಾರತದಲ್ಲಿ ಕೇಂದ್ರ ಸರ್ಕಾರದಿಂದ 54.04 ಕೋಟಿ ಡೋಸ್ ಲಸಿಕೆ ಪೂರೈಕೆ

ನವದೆಹಲಿ, ಆಗಸ್ಟ್ 12: ಭಾರತದಲ್ಲಿ ಕೊರೊನಾವೈರಸ್ ಹರಡುವಿಕೆ ವೇಗವನ್ನು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕೇಂದ್ರ ಸರ್ಕಾರದಿಂದ ಲಸಿಕೆಯ ಸರಬರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಈವರೆಗೂ ಎಷ್ಟು ಪ್ರಮಾಣದ ಲಸಿಕೆ ಪೂರೈಕೆ ಆಗಿದೆ ಎಂಬುದರ ಮಾಹಿತಿ ತಿಳಿಯೋಣ.

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯಲ್ಲಿ ಸಿಂಹಪಾಲನ್ನು ಕೇಂದ್ರ ಸರ್ಕಾರದಿಂದಲೇ ಖರೀದಿಸಲಾಗುತ್ತಿದೆ.

ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

COVID-19 Vaccines : Over 54.04 crore vaccine doses provided to states and UTs so far, says Centre

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮಾಹಿತಿ:

2021ರ ಆಗಸ್ಟ್ 12ರ ಅಂಕಿ-ಅಂಶಗಳ ಪ್ರಕಾರ, 54,04,78,610 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 54,04,78,610

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,09,83,510

* ಬಳಕೆ ಆಗಿರುವ ಲಸಿಕೆ ಪ್ರಮಾಣ - 52,00,96,418

* ಕೊವಿಡ್-19 ಲಸಿಕೆಯ ಲಭ್ಯತೆ - 2,55,54,533

ಕೊವಿಡ್-19 ಲಸಿಕೆ ವಿತರಣೆ ಬಗ್ಗೆ ತಿಳಿಯಿರಿ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಭಾರತದಲ್ಲಿ ಈವರೆಗೂ ಲಸಿಕೆ ಪಡೆದುಕೊಂಡವರ ಸಂಖ್ಯೆ:

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 209 ದಿನಗಳಲ್ಲಿ 52.89 ಕೋಟಿಗೂ ಅಧಿಕ ಮಂದಿಗೆ ಲಸಿಕೆ ವಿತರಿಸಲಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 50,77,491 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 52,89,27,844 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಒಂದೇ ದಿನ 39,49,956 ಫಲಾನುಭವಿಗಳಿಗೆ ಮೊದಲ ಡೋಸ್, 11,27,535 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ 18 ರಿಂದ 44 ವಯೋಮಾನದ 20,58,952 ಜನರಿಗೆ ಮೊದಲ ಡೋಸ್ ಹಾಗೂ 4,30,665 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಇದೇ ವಯೋಮಾನದ 18,45,43,154 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,34,04,637 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+