ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ದೀಪಾವಳಿ ವೇಳೆಗೆ ಕೊರೊನಾ ನಿಯಂತ್ರಣಕ್ಕೆ: ಹರ್ಷವರ್ಧನ್

|
Google Oneindia Kannada News

ನವದೆಹಲಿ, ಆಗಸ್ಟ್ 31: ದೇಶದಲ್ಲಿ ದೀಪಾವಳಿ ವೇಳೆಗೆ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

Recommended Video

ನಾವು ಏನು ಮಾಡಿಲ್ಲ ಎಂದು Indiaಕ್ಕೆ ಸ್ಪಷ್ಟನೆ ಕೊಟ್ಟ China | Oneindia Kannada

ದೇಶದಲ್ಲಿ ಕೊರೊನಾ ಸೋಂಕಿಗೆ 3 ಔಷಧಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿದ್ದು, ವರ್ಷಾಂತ್ಯಕ್ಕೆ ನಮ್ಮ ದೇಶದಲ್ಲೇ ಕೊರೊನಾಗೆ ಲಸಿಕೆ ಲಭ್ಯವಾಗಲಿದೆ.

24 ಗಂಟೆಯಲ್ಲಿ ಭಾರತದಲ್ಲಿ 78,761 ಹೊಸ ಕೋವಿಡ್ ಪ್ರಕರಣ24 ಗಂಟೆಯಲ್ಲಿ ಭಾರತದಲ್ಲಿ 78,761 ಹೊಸ ಕೋವಿಡ್ ಪ್ರಕರಣ

ಅಲ್ಲದೆ ದೀಪಾವಳಿ ವೇಳೆಗೆ ಈಗ ತಾರಕಕ್ಕೇರಿರುವ ಕೊರೊನಾ ಸೋಂಕು ವಿರುದ್ಧ ಬಿಗಿ ನಿಯಂತ್ರಣ ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ. ದೇಶವು ಕೊರೊನಾ ನಿಯಂತ್ರಣದಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ, ಭಾನುವಾರ ಬೆಂಗಳೂರಿನಲ್ಲಿ ಕೇಂದ್ರ ಮಾಜಿ ಸಚಿವ ದಿ. ಅನಂತ‌ಕುಮಾರ್ ಅವರ ಹೆಸರಿನಲ್ಲಿರುವ ಪ್ರತಿಷ್ಠಾನವು ಆಯೋಜಿಸಿದ್ದ ಕೊರೊನಾ ಕಾಲದಲ್ಲಿ ಸಮರ್ಥ ನಾಯಕತ್ವ ಹಾಗೂ ದೇಶ ಮೊದಲು ಎಂಬ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿರು.

ಸಾವಿನ ನಿಯಂತ್ರಣದಲ್ಲೂ ಮೊದಲ ಸ್ಥಾನ

ಸಾವಿನ ನಿಯಂತ್ರಣದಲ್ಲೂ ಮೊದಲ ಸ್ಥಾನ

ಕೊರೊನಾ ಆರಂಭದಲ್ಲಿ ದೇಶಕ್ಕೆ ಆಗಮಿಸದ್ದ ಹಾರ್ವರ್ಡ್ ಹಾಗೂ ಪ್ರಮುಖ ಸಂಶೋಧನಾ ತಜ್ಞರು ಜೂನ್ ತಿಂಗಳ ವೇಳೆಗೆ 3 ಕೋಟಿ ಭಾರತೀಯರಿಗೆ ಸೋಂಕು ಹರಡಲಿದೆ , ಇದರಿಂದ 50-60 ಲಕ್ಷ ಮಂದಿ ಸಾವನ್ನಪ್ಪಲಿದ್ದಾರೆ. ಎಂದು ಅಂದಾಜಿಸಿದ್ದರು. ಈಗ ನಾವು ಆಗಸ್ಟ್ ತಿಂಗಳಿನಲ್ಲಿದ್ದೇವೆ 35 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 27 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಶೇ.77ರಷ್ಟು ಮಂದಿ ಚೇತರಿಕೆ ಕಂಡಿದ್ದಾರೆ.ಕೇವಲ ಶೇ.1.8ರಷ್ಟು ಸಾವಿನ ದರದ ಮೂಲಕ ವಿಶ್ವದಲ್ಲೇ ಕೊರೊನಾ ನಿಯಂತ್ರಣದಲ್ಲಿ ಮೊದಲ ಸ್ಥಾನದಲ್ಲಿದೆ.

ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ

ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಕೊರೊನಾ ಸೋಂಕನ್ನು ಸಮರ್ಥವಾಗಿ ಎದುರಿಸಿದ್ದೇವೆ. ನಿತ್ಯ 10 ಲಕ್ಷಕ್ಕೂ ಹೆಚ್ಚು ಪರೀಕ್ಷೆ ಮಾಡುತ್ತಿದ್ದೇವೆ . ಅಲ್ಲದೆ, ಪಿಪಿಇ ಕಿಟ್, ಉತ್ಪಾದಿಸುತ್ತಿದ್ದಾರೆ. ರಾಜ್ಯಗಳು ಸಾಕು ಎನ್ನುವಷ್ಟು ಪೂರೈಕೆ ನಮ್ಮಲ್ಲಿದೆ ಎಂದು ಹೇಳಿದರು.

ವಿಶ್ವದಲ್ಲಿ ಕೊರೊನಾ ಸೋಂಕಿಗೆ ಸಂಶೋಧನೆ ನಡೆಯುತ್ತಿದ್ದು ದೇಶದಲ್ಲಿ 9 ಸಂಶೋಧನೆಗಳು ನಡೆಯುತ್ತಿವೆ.
ಕರ್ನಾಟಕದಲ್ಲಿ ಕ್ರಾಂತಿಕಾರಿ ಬದಲಾವಣೆ

ಕರ್ನಾಟಕದಲ್ಲಿ ಕ್ರಾಂತಿಕಾರಿ ಬದಲಾವಣೆ

ಕೊರೊನಾ ಪರಿಸ್ಥಿತಿ ಬಳಸಿಕೊಂಡು ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿದ್ದೇವೆ, ಭೂ ಸುಧಾರಣೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆ, ಹೊಸ ಕೈಗಾರಿಕ ನೀತಿ, ಕೈಗಾರಿಕಾ ಸೌಲಭ್ಯ ಕಾಯಿದೆ, ಬಂಡವಾಳ ಹೂಡಿಕೆಗೆ ನೀತಿ ನಿಯಮಗಳ ಸಡಿಲಿಕೆ ಹೀಗೆ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲೂ ನಾವು ತೆಗೆದುಕೊಂಡ ಕ್ರಮ ದೇಶಕ್ಕೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮಾಸ್ಕ್, ದೈಹಿಕ ಅಂತರವೇ ಮದ್ದು

ಮಾಸ್ಕ್, ದೈಹಿಕ ಅಂತರವೇ ಮದ್ದು

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ದೇಶ ಹಾಗೂ ರಾಜ್ಯ ಕೊರೊನಾ ಹಾಗೂ ನೆರೆಯ ನಡುವೆ ಸ್ಯಾಂಡ್‌ವಿಚ್ ಆಗಿದೆ. ಕೊರೊನಾ ಲಕ್ಷಣಗಳು ಬದಲಾಗಿ ತಲೆನೋವು, ಡಯೇರಿಯಾದಂತಹ ಲಕ್ಷಣಗಳಾಗಿ ಬದಲಾಗಿವೆ.ಲಸಿಕೆ ಇನ್ನೂ ಲಭ್ಯವಾಗಿಲ್ಲದ ಕಾರಣ ದೈಹಿಕ ಅಂತರ ಹಾಗೂ ಮಾಸ್ಕ್ ಬಳಕೆಯನ್ನೇ ಸಾಮಾಜಿಕ ಲಸಿಕೆಗಳಾಗಿ ಪಾಲಿಸಬೇಕು.

English summary
Union Health Minister Dr Harsh Vardhan on Sunday expressed confidence that the country's COVID-19 count will be "under control" by Diwali this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X