ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್: ತಾಜ್ ಮಹಲ್‌ಗೆ ಪರೀಕ್ಷೆಯಿಲ್ಲದೆ ಪ್ರವಾಸಿಗರಿಗೆ ಪ್ರವೇಶವಿಲ್ಲ

|
Google Oneindia Kannada News

ಆಗ್ರಾ, ಡಿಸೆಂಬರ್‌ 22: ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಅನ್ನು ಅಲರ್ಟ್ ಮಾಡಲಾಗಿದೆ ಎಂದು ಆಗ್ರಾದ ಜಿಲ್ಲಾ ಆರೋಗ್ಯ ಮಾಹಿತಿ ಅಧಿಕಾರಿ ಖಚಿತಪಡಿಸಿದ್ದಾರೆ.

ಆಗ್ರಾದ ತಾಜ್ ಮಹಲ್ ಅನ್ನು ವೀಕ್ಷಿಸಲು ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರು ಭೇಟಿ ನೀಡುವ ಮೊದಲು ಅವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ತಾಜ್ ಮಹಲ್‌ ಮೇಲೆ 1 ಕೋಟಿ ರೂಪಾಯಿ ನೀರಿನ ಬಿಲ್ತಾಜ್ ಮಹಲ್‌ ಮೇಲೆ 1 ಕೋಟಿ ರೂಪಾಯಿ ನೀರಿನ ಬಿಲ್

ಜಿಲ್ಲಾ ಆರೋಗ್ಯ ಮಾಹಿತಿ ಅಧಿಕಾರಿ (ಆಗ್ರಾ) ಅನಿಲ್ ಸತ್ಸಂಗಿ ಮಾತನಾಡಿ, "ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹರಡುವುದನ್ನು ತಡೆಯಲು ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಮುನ್ನೇಚ್ಚರಿಕಾ ಕ್ರಮ ಕೈಗೊಂಡಿರುವುದರಿಂದ ಈಗ ಎಲ್ಲಾ ಸಂದರ್ಶಕರಿಗೆ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

Covid allert: Tourists not allowed to enter Taj Mahal without a test

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಯುನೈಟೆಡ್ ಸ್ಟೇಟ್ಸ್ ಫ್ರಾನ್ಸ್ ಸೇರಿದಂತೆ ವಿವಿಧ ದೇಶಗಳಲ್ಲಿ ಇತ್ತೀಚೆಗೆ ಕೊರೊನಾ ವೈರಸ್ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೇಶದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಲ್ಲಿ ಸರ್ಕಾರವು ಆರ್‌ಟಿ-ಪಿಸಿಆರ್ ಪರೀಕ್ಷಾ ಮಾದರಿಯನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ.

ನಾವು ದೇಶದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಲ್ಲಿ ಸಾಮೂಹಿಕ ಆರ್‌ಟಿ-ಪಿಸಿಆರ್‌ ಮಾದರಿ ತಪಾಸಣೆಯನ್ನು ಪ್ರಾರಂಭಿಸಿದ್ದೇವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ನಾವು ಬದ್ಧರಾಗಿದ್ದೇವೆ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದು, ಜನರು ಮಾಸ್ಕ್ ಧರಿಸುವುದನ್ನು, ಸ್ಯಾನಿಟೈಜರ್‌ಗಳನ್ನು ಬಳಸುವುದನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ತಾಜ್ ಮಹಲ್‌ ಮೇಲಿನ 1.4 ಲಕ್ಷ ರೂ. ಮನೆ ತೆರಿಗೆ ಪಾವತಿಸುವಂತೆ ನೋಟೀಸ್ತಾಜ್ ಮಹಲ್‌ ಮೇಲಿನ 1.4 ಲಕ್ಷ ರೂ. ಮನೆ ತೆರಿಗೆ ಪಾವತಿಸುವಂತೆ ನೋಟೀಸ್

ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕೆ ಪ್ರಮಾಣಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ರಾಜ್ಯಗಳಿಗೆ ಕರೆ ನೀಡಿದ್ದಾರೆ. ನಾವು ಜಾಗತಿಕ ಕೋವಿಡ್ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿದ್ದೇವೆ ಮತ್ತು ಅದಕ್ಕೆ ಅನುಗುಣವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೋವಿಡ್19 ರ ಹೊಸ ರೂಪಾಂತರವನ್ನು ಸಮಯೋಚಿತವಾಗಿ ಗುರುತಿಸಲು ಜೀನೋಮ್-ಸೀಕ್ವೆನ್ಸಿಂಗ್ ಅನ್ನು ಹೆಚ್ಚಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರವು ರಾಜ್ಯಗಳಿಗೆ ಆರ್ಥಿಕ ನೆರವು ನೀಡಿದೆ. ಇಲ್ಲಿಯವರೆಗೆ, 220 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಪ್ರಪಂಚದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರೂ ಭಾರತದಲ್ಲಿ ಕ್ಷೀಣಿಸುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

English summary
Agra's District Health Information Officer has confirmed that Agra's Taj Mahal, one of the most popular tourist destinations in the country, has been alerted in the wake of rising Covid cases in China and other countries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X