ಕೋವಿಡ್‌: ಜನ ಆಕ್ರೋಶ್‌ ಯಾತ್ರೆ ಸ್ಥಗಿತಗೊಳಿಸಿದ ಬಿಜೆಪಿ

ನವದೆಹಲಿ, ಡಿಸೆಂಬರ್‌ 22: ಜಾಗತಿಕವಾಗಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ ಬಿಜೆಪಿ ತನ್ನ ಜನ ಆಕ್ರೋಶ್‌ ಯಾತ್ರೆ ಅನ್ನು ಸ್ಥಗಿತಗೊಳಿಸಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಗುರುವಾರ ಹೇಳಿದ್ದಾರೆ.

ಮುಂದಿನ ವರ್ಷ ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಡಿಸೆಂಬರ್ 1 ರಂದು ರೈತರು ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಟೀಕೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯ ರಾಜಸ್ತಾನದಲ್ಲಿ ಜನ ಆಕ್ರೋಶ್‌ ಯಾತ್ರೆ' ಪ್ರಾರಂಭಿಸಿದ್ದರು. ಪ್ರಸ್ತುತ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಜನ ಆಕ್ರೋಶ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಬಿಜೆಪಿಗೆ ರಾಜಕೀಯಕ್ಕಿಂತ ಮೊದಲು ಜನ ಬರುತ್ತಾರೆ. ನಮಗೆ ಜನರ ಸುರಕ್ಷತೆ, ಅವರ ಆರೋಗ್ಯವು ಆದ್ಯತೆಯಾಗಿದೆ. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಬೆಳಿಗ್ಗೆ ಮತ್ತು ಸಂಜೆಯ ನಡಿಗೆ ಎಂದು ಬಣ್ಣಿಸಿದ ಸಿಂಗ್, ಪಕ್ಷವು ರಾಜಕೀಯಕ್ಕಾಗಿ ಜನರ ಜೀವನದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿದರು.

Covid: BJP suspends Jan Akrosh Yatra

ಇನ್ನು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಫ್ಲಾಪ್ ಶೋ ಆಗಿದೆ. ಇದು ಬೆಳಗಿನ ಸಂಜೆಯ ವಾಕ್ ಬಿಟ್ಟರೆ ಬೇರೇನೂ ಅಲ್ಲ. ಕಾಂಗ್ರೆಸ್ ತನ್ನ ಕ್ಷುಲ್ಲಕ ರಾಜಕಾರಣಕ್ಕಾಗಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಬಾರದು ಎಂದಿದ್ದಾರೆ. ಗುರುವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೋವಿಡ್ 19 ಪ್ರಕರಣಗಳ ಜಾಗತಿಕ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ವಿಶೇಷವಾಗಿ ಮುಂಬರುವ ಹಬ್ಬಗಳು ಮತ್ತು ಹೊಸ ವರ್ಷಾಚರಣೆಗಳ ದೃಷ್ಟಿಯಿಂದ ಫೇಸ್ ಮಾಸ್ಕ್ ಧರಿಸುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸುವ ಬಗ್ಗೆ ಜಾಗೃತಿ ಮೂಡಿಸಲು ಅವರು ರಾಜ್ಯಗಳಿಗೆ ಎಚ್ಚರಿಕೆ ನೀಡಿದರು.

Covid: BJP suspends Jan Akrosh Yatra

ಲೋಕಸಭೆಯಲ್ಲಿ ಹೇಳಿಕೆ ನೀಡಿದ ಮನ್ಸೂಖ್‌ ಮಾಂಡವಿಯಾ, ವೈರಸ್‌ನ ನಿರಂತರವಾಗಿ ವಿಕಸನಗೊಳ್ಳುತ್ತಿರುವ ಸ್ವಭಾವವು ಜಾಗತಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ. ಅದು ವಾಸ್ತವಿಕವಾಗಿ ಪ್ರತಿಯೊಂದು ದೇಶದ ಮೇಲೆ ಪರಿಣಾಮ ಬೀರುತ್ತದೆ. ಭಾರತದಲ್ಲಿ ಪ್ರತಿದಿನ ಸರಾಸರಿ 153 ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಪ್ರಪಂಚದಾದ್ಯಂತ ಪ್ರತಿದಿನ 5.87 ಲಕ್ಷ ಪ್ರಕರಣಗಳು ವರದಿಯಾಗುತ್ತಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+