ದೇಶದಲ್ಲಿ ಒಂದೇ ದಿನ 800 ದಾಟಿದ Covid 19 ಕೇಸ್: ಕೇಂದ್ರದಿಂದ 6 ರಾಜ್ಯಗಳಿಗೆ (H3N2 Virus) ಪತ್ರ
ದೇಶದಲ್ಲಿ ಒಂದೇ ದಿನ 800 ದಾಟಿದ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಕೇಂದ್ರದಿಂದ 6 ರಾಜ್ಯಗಳಿಗೆ ಪತ್ರ ಬರೆಯಲಾಗಿದೆ.
ಹೊಸದಿಲ್ಲಿ ಮಾರ್ಚ್ 18: ಭಾರತದಲ್ಲಿ ದಾಖಲಾದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ತಿಂಗಳುಗಳಲ್ಲಿ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 841 ಹೊಸ ಪ್ರಕರಣಗಳು ದಾಖಲಾಗಿದ್ದು ಸಕ್ರಿಯ ಪ್ರಕರಣಗಳ ಈಗ 5,389 ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 4.46 ಕೋಟಿಗೆ (4,46,94,349) ಏರಿಕೆಯಾಗಿದೆ ಎಂದು ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಅಧಿಕೃತ ಅಂಕಿಅಂಶಗಳು ತೋರಿಸುತ್ತವೆ. ಜಾರ್ಖಂಡ್ ಮತ್ತು ಮಹಾರಾಷ್ಟ್ರ ತಲಾ ಒಂದು ಸಾವು ವರದಿ ಮಾಡಿದರೆ, ಎರಡು ಕೇರಳದಲ್ಲಿ ಕೊರೊನಾ ಸಾವುಗಳು ದಾಖಲಾಗಿವೆ.

ನಾಲ್ಕು ರಾಜ್ಯಗಳಲ್ಲಿ ಕೊರೊನಾ ಹೆಚ್ಚಳ
ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್‌ನಲ್ಲಿ ಅತಿ ಹೆಚ್ಚು ವೈರಲ್ ಸೋಂಕು ಪ್ರಕರಣಗಳಿವೆ ಎಂದು ಅಂಕಿಅಂಶಗಳು ತೋರಿಸಿವೆ. ಭಾರತದ ದೈನಂದಿನ ಸರಾಸರಿ ಹೊಸ ಕೋವಿಡ್ ಪ್ರಕರಣಗಳು ತಿಂಗಳಿಗೆ ಆರು ಪಟ್ಟು ಹೆಚ್ಚುತ್ತಿವೆ. ಒಂದು ತಿಂಗಳ ಹಿಂದೆ (ಫೆ 18) 112 ರಷ್ಟಿದ್ದ ದೈನಂದಿನ ಸರಾಸರಿ ಹೊಸ ಪ್ರಕರಣಗಳು ಈಗ (ಮಾರ್ಚ್ 18) 626 ಆಗಿದೆ.
ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ. ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತದಷ್ಟು ದಾಖಲಾಗಿದೆ.

ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,58,161 ಕ್ಕೆ ಏರಿಕೆಯಾಗಿದೆ ಮತ್ತು ಪ್ರಕರಣದಲ್ಲಿ ಸಾವಿನ ಪ್ರಮಾಣ ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 220.64 ಕೋಟಿ ಡೋಸ್ COVID-19 ಲಸಿಕೆಗಳನ್ನು ನೀಡಲಾಗಿದೆ.
ವೈರಲ್ ಸೋಂಕಿನ ಹಠಾತ್ ಹೆಚ್ಚಳ
ವೈರಲ್ ಸೋಂಕಿನ ಹಠಾತ್ ಹೆಚ್ಚಳವನ್ನು ನಿಯಂತ್ರಿಸುವತ್ತ ಗಮನಹರಿಸಬೇಕು ಎಂದು ಕೇಂದ್ರ ಆರು ರಾಜ್ಯಗಳಿಗೆ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ಬುಧವಾರ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದು ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಮತ್ತು ಲಸಿಕೆಗೆ ಒತ್ತು ನೀಡುವಂತೆ ಕೇಳಿಕೊಂಡಿದ್ದಾರೆ.

ಆರು ರಾಜ್ಯಗಳಿಗೆ ಬರೆದ ಪತ್ರದಲ್ಲಿ, ಆರೋಗ್ಯ ಸಚಿವಾಲಯವು ಕೆಲವು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿದೆ ಎಂದು ತಿಳಿಸಿದ್ದು, ಸೋಂಕಿನ ಸಂಭವನೀಯ ಸ್ಥಳೀಯ ಹರಡುವಿಕೆಯನ್ನು ಸೂಚಿಸುತ್ತದೆ. ಸೋಂಕನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಅನುಸರಿಸುವ ಅವಶ್ಯಕತೆಯಿದೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಇಲ್ಲಿಯವರೆಗೆ ಗಳಿಸಿದ ಲಾಭಗಳನ್ನು ಕಳೆದುಕೊಳ್ಳದೆ, ಸೂಕ್ತ ಕ್ರಮಕ್ಕೆ ಕೇಂದ್ರ ಸೂಚಿಸಿದೆ.
ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಶನಿವಾರದಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೆಲವು ರಾಜ್ಯಗಳಲ್ಲಿ ಕೋವಿಡ್ ಪರೀಕ್ಷಾ ಪಾಸಿಟಿವಿಟಿ ದರಗಳು ಕ್ರಮೇಣ ಏರಿಕೆಯಾಗುತ್ತಿವೆ. ಇದನ್ನು ಸಂಬಂಧಪಟ್ಟ ಸಮಸ್ಯೆ ಎಂದು ಕರೆದ ಅವರು, ಇದನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಹೇಳಿದರು.

ಭಾರತದಲ್ಲಿ ಒಂದೇ 1,02,591 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,02,14,252 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.












Click it and Unblock the Notifications