ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳೆದ 24 ಗಂಟೆಗಳಲ್ಲಿ 3 ಬಾರಿ ಆಮ್ಲಜನಕ ಪೂರೈಕೆಗೆ ಸರ್ಕಾರದಿಂದ ಆರ್ಡರ್

|
Google Oneindia Kannada News

ನವದೆಹಲಿ, ಏಪ್ರಿಲ್ 16: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರವು ಕಳೆದ 24 ಗಂಟೆಗಳಲ್ಲಿ 3 ಬಾರಿ ಆರ್ಡರ್ ಮಾಡಿದೆ.

ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದ್ದು, ಆಕ್ಸಿಜನ್ ಪೂರೈಕೆಯಿಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಸರ್ಕಾರವು ಆಕ್ಸಿಜನ್ ಸಿಲಿಂಡರ್‌ಗಾಗಿ ಒಂದೇ ದಿನದಲ್ಲಿ ಮೂರು ಬಾರಿ ಆರ್ಡರ್ ಮಾಡಿದೆ.

ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಮೋದಿ ಕರೆವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಮೋದಿ ಕರೆ

ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Covid Cases Rises, Governments 3rd Order For Oxygen Supply In 24 Hours

ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು.

ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ.

ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.

English summary
Less than 10 days after insisting there is no shortage of medical oxygen - even as hospitals across the country red-flagged low stocks and Covid patients died - the centre on Friday evening issued its third emergency order in 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X