Covid: ಭಾರತದಲ್ಲಿ 257 ಕೋವಿಡ್ ಪ್ರಕರಣ ಪತ್ತೆ; ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ಹೇಳಿದ್ದೇನು?
ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಹೆಚ್‌ಎಸ್) ಪರಿಶೀಲನಾ ಸಭೆ ನಡೆಸಿದ್ದಾರೆ. ಭಾರತದಲ್ಲೂ 257 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಪತ್ತೆಯಾಗಿರುವ ಬಹುತೇಕ ಪ್ರಕರಣಗಳು ಸೌಮ್ಯವಾಗಿದ್ದು ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ, ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಹೇಳಿದೆ.
ಭಾರತದಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು 257 ರಷ್ಟಿವೆ ಎಂದು ಸರ್ಕಾರ ತಿಳಿಸಿದೆ. ಈ ಎಲ್ಲಾ ಪ್ರಕರಣಗಳು ಸೌಮ್ಯವಾಗಿದ್ದು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ತಿಳಸಿದೆ. ಡಿಜಿಹೆಚ್‌ಎಸ್ ಸಭೆಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ), ತುರ್ತು ವೈದ್ಯಕೀಯ ಪರಿಹಾರ (ಇಎಂಆರ್) ವಿಭಾಗ, ವಿಪತ್ತು ನಿರ್ವಹಣಾ ಕೋಶ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಆರೋಗ್ಯ ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸೂಕ್ತ ಕ್ರಮಗಳನ್ನು ಜಾರಿಗೆ ತರಲು ಮತ್ತು ಮೇಲ್ವಿಚಾರಣೆ ಮಾಡಲು ಸಜ್ಜಾಗಿದೆ ಎಂದು ತಿಳಿಸಿದೆ. ಸದ್ಯ ನಾಗರಿಕರು ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಏಷ್ಯಾದ ಹಲವು ಭಾಗಗಳಲ್ಲಿ ಹೆಚ್ಚಿನ ಸೋಂಕು
ಏಷ್ಯಾದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯ ಹೊರತಾಗಿಯೂ, ದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಭಾರತದ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಎಎನ್‌ಐ ವರದಿಯ ಪ್ರಕಾರ ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಹೆಚ್ಚಳವಾಗಿದೆ. ಆದರೆ ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂಟಿಗ್ರೇಟೆಡ್ ಡಿಸೀಸ್ ಸರ್ವೈಲೆನ್ಸ್ ಪ್ರೋಗ್ರಾಂ (IDSP) ಮತ್ತು ICMR ಮೂಲಕ ಕೋವಿಡ್-19 ಸೇರಿದಂತೆ ಉಸಿರಾಟದ ವೈರಲ್ ಕಾಯಿಲೆಗಳ ಕಣ್ಗಾವಲುಗಾಗಿ ಬಲವಾದ ವ್ಯವಸ್ಥೆಯು ದೇಶದಲ್ಲಿ ಅಸ್ತಿತ್ವದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗ್ನೇಯ ಏಷ್ಯಾದ ಹಾಂಗ್ ಕಾಂಗ್ ಮತ್ತು ಸಿಂಗಾಪುರದಿಂದ ಥೈಲ್ಯಾಂಡ್‌ಗೆ ಸೋಂಕು ಹರಡಿದೆ. ಹೊಸದಾಗಿ ಕಂಡುಬರುವ ಹೆಚ್ಚಿನ ಪ್ರಕರಣಗಳು ಓಮಿಕ್ರಾನ್ ರೂಪಾಂತರ JN.1 ಮತ್ತು ಅದರ ಸಂಬಂಧಿತ ವಂಶಾವಳಿಯ ವೈರಸ್‌ನಿಂದ ಹರಡುತ್ತಿವೆ. ಮೇ ತಿಂಗಳ ಆರಂಭದಲ್ಲಿ ಸಿಂಗಾಪುರದಲ್ಲಿ 14,000 ಕ್ಕೂ ಹೆಚ್ಚಿನ ಪ್ರಕರಣಗಳು ಕಂಡುಬಂದವು, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಲ್ಲಿಯೂ ಇದೇ ರೀತಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications