ಭಾರತದಲ್ಲಿ ಕೊರೊನಾವೈರಸ್ ದೈನಂದಿನ ಪಾಸಿಟಿವಿಟಿ ದರ 2.04%
ಬೆಂಗಳೂರು, ಆಗಸ್ಟ್ 13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 205,747,424ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 184,730,415ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 189,072,078 ಪ್ರಕರಣಗಳು ಮುಕ್ತಾಯಗೊಂಡಿವೆ.
ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.
ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಸುಮಾರು 53 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ, 52,95,82,956 ಡೋಸ್ ಲಸಿಕೆ ಹಾಕಲಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬಿಡುಗಡೆಯಾಗಿರುವ ತಾತ್ಕಾಲಿಕ ವರದಿಯ ಪ್ರಕಾರ, 60,40,607 ಆಂದೋಲನಗಳಲ್ಲಿ ಈ ಸಾಧನೆ ಮಾಡಲಾಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲೇ 57,31,574 ಡೋಸ್ ಲಸಿಕೆ ಹಾಕಲಾಗಿದೆ.
ಪ್ರಸ್ತುತ ಭಾರತದ ಚೇತರಿಕೆ ದರ ಶೇ.97.46ರಷ್ಟಿದೆ. ಸಾಂಕ್ರಾಮಿಕ ಪ್ರಾರಂಭವಾದ ನಂತರ ಇದುವರೆಗೂ ಭಾರತ ಸಾಧಿಸಿದ ಗರಿಷ್ಠ ಚೇತರಿಕೆ ದರ ಇದಾಗಿದೆ.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳ ಮೂಲಕ 55.01 ಕೋಟಿಗಿಂತಲೂ ಅಧಿಕ (55,01,93,040) ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ ಮತ್ತು ಇನ್ನೂ 59,16,920 ಡೋಸ್‌ಗಳು ಪೂರೈಕೆ ಹಂತದಲ್ಲಿವೆ.
ಈ ಪೈಕಿ, ವ್ಯರ್ಥವಾದ ಲಸಿಕೆಗಳೂ ಸೇರಿದಂತೆ ಒಟ್ಟು 52,59,93,669 ಡೋಸ್‌ಗಳನ್ನು ಬಳಕೆ ಮಾಡಲಾಗಿದೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿದ್ದ ದತ್ತಾಂಶದ ಪ್ರಕಾರ). ಉಳಿಕೆಯಾದ ಮತ್ತು ಬಳಕೆಯಾಗದ ಇನ್ನೂ 2.82 ಕೋಟಿಗೂ ಅಧಿಕ (2,55,54,533) ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿವೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 2.13% ಮತ್ತು ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆಯಾಗಿದೆ. ಸತತ 18 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 67 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 13ರಂತೆ) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 41,709 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40,078 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,149,514ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 430,631ಕ್ಕೆ ಏರಿಕೆಯಾಗಿದೆ, 31,323,983ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 41,709ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.46%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 206,514,123 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,352,999ಕ್ಕೇರಿದೆ. ಒಟ್ಟಾರೆ, 185,322,992ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,838,132 ಸಕ್ರಿಯ ಪಾಸಿಟಿವ್ 103,131 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 189,675,991 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 37,210,382ಪ್ರಕರಣಗಳು
ಭಾರತ: 32,117,826
ಬ್ರೆಜಿಲ್: 20,285,067
ರಷ್ಯಾ: 6,557,068
ಫ್ರಾನ್ಸ್: 6,398,983
ಯುಕೆ: 6,211,868
ಟರ್ಕಿ: 6,018,485
ಅರ್ಜೆಂಟೀನಾ: 5,066,253
ಕೊಲಂಬಿಯಾ: 4,856,595
ಸ್ಪೇನ್ : 4,677,883

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 636,345
ಬ್ರೆಜಿಲ್: 566,988
ಭಾರತ: 430,285
ಮೆಕ್ಸಿಕೋ: 246,811
ರಷ್ಯಾ: 168,864
ಯುಕೆ: 130,801
ಇಟಲಿ: 128,334
ಕೊಲಂಬಿಯಾ: 123,097
ಫ್ರಾನ್ಸ್: 112,487
ಅರ್ಜೆಂಟೀನಾ: 108,569

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,302,345
ಯುಎಸ್ಎ: 30,097,898
ಬ್ರೆಜಿಲ್: 19,151,021
ರಷ್ಯಾ: 5,848,340
ಫ್ರಾನ್ಸ್: 5,840,584
ಟರ್ಕಿ: 5,558,722
ಯುಕೆ: 4,770,056
ಅರ್ಜೆಂಟೀನಾ: 4,713,411
ಕೊಲಂಬಿಯಾ: 4,675,215
ಇಟಲಿ: 4,170,810
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications