ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ: ದೇಶದಲ್ಲಿ ಮುನ್ನೆಚ್ಚರಿಕೆ ವಹಿಸಲು ತಜ್ಞರ ಜೊತೆ ಆರೋಗ್ಯ ಸಚಿವರ ಸಭೆ

|
Google Oneindia Kannada News

ನವದೆಹಲಿ, ಡಿ. 21: ಚೀನಾದಲ್ಲಿ ಏಕಾಏಕಿ ಕೋವಿಡ್ ಉಲ್ಬಣಗೊಂಡಿದ್ದು, ದೇಶದಲ್ಲಿಯೂ ಎಚ್ಚರಿಕೆಯನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕೇಂದ್ರವು ಪೂರ್ವಸಿದ್ಧತಾ ಕ್ರಮಗಳನ್ನು ತೆಗೆದುಕೊಳ್ಳಲು, ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಬುಧವಾರ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಎಲ್ಲಾ ಕೊರೊನಾ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳು ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗಳಿಗೆ ಪ್ರತಿದಿನ ಕಳುಹಿಸಬೇಕು ಎಂದು ಸರ್ಕಾರ ತಿಳಿಸಿದೆ. ಭಾರತದಲ್ಲಿ ಕೊವೀಡ್‌ನ ವಿವಿಧ ರೂಪಾಂತರಗಳನ್ನು ಅಧ್ಯಯನ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲು INSACOG ಆರೋಗ್ಯ ಸಚಿವಾಲಯದ ಅಡಿಯಲ್ಲಿರುವ ಒಂದು ವೇದಿಕೆಯಾಗಿದೆ.

ಕೊರೊನಾ ಸ್ಫೋಟ: 3 ತಿಂಗಳಲ್ಲಿ 60% ಚೀನಾಗೆ ಕೊರೊನಾ ಸೋಂಕು, ತಜ್ಞರ ವರದಿಕೊರೊನಾ ಸ್ಫೋಟ: 3 ತಿಂಗಳಲ್ಲಿ 60% ಚೀನಾಗೆ ಕೊರೊನಾ ಸೋಂಕು, ತಜ್ಞರ ವರದಿ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 112 ಹೊಸ ಕೊರೊನಾ ಪ್ರಕರಣಗಳು ವರದಿ ಮಾಡಿವೆ. ಸೋಮವಾರ 181 ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ ಅದು ಕಡಿಮೆಯಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,490 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

Covid surge in China: Central Government Hold Big Meeting Wednesday

ಕಳೆದ 24 ಗಂಟೆಗಳಲ್ಲಿ ಮೂರು ಸಾವುಗಳು ದಾಖಲಾಗಿವೆ. ಕೇರಳದಿಂದ ಇಬ್ಬರು ಮತ್ತು ಮಹಾರಾಷ್ಟ್ರದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಒಟ್ಟು 5,30,677 ಕ್ಕೆ ತಲುಪಿದೆ. ರಾಷ್ಟ್ರವ್ಯಾಪಿ ಇದುವರೆಗೆ ಸುಮಾರು 220 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

"ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಉಲ್ಬಣವಾಗಿದೆ. ಹೀಗಾಗಿ, ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಪ್ರಕರಣದ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಸಜ್ಜುಗೊಳಿಸುವುದು ಅತ್ಯಗತ್ಯ" ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ.

ಕಟ್ಟುನಿಟ್ಟಾದ ಲಾಕ್‌ಡೌನ್‌ಗಳು ಮತ್ತು ಸಾಮೂಹಿಕ ಪರೀಕ್ಷೆಯನ್ನು ವಿಧಿಸಿದ ಚೀನಾ ಒಂದೇ ಬಾರಿಗೆ ಮಾರ್ಗಸೂಚಿಗಳನ್ನು ತೆಗೆದುಹಾಕಿದ್ದರಿಂದ ಕೋವಿಡ್ ಸಂಬಂಧಿತ ಸಾವುಗಳು ಉಲ್ಬಣವಾಗುತ್ತಿದೆ ಎಂದು ವರದಿಯಾಗಿದೆ.

Covid surge in China: Central Government Hold Big Meeting Wednesday

ವರದಿಗಳ ಪ್ರಕಾರ, ಇತ್ತೀಚಿಗೆ ಚೀನಾದ ಆಸ್ಪತ್ರೆಗಳು ಬೆಡ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಔಷಧಾಲಯಗಳು ಔಷಧಿಗಳ ಕೊರತೆಯನ್ನು ಎದುರಿಸುತ್ತಿವೆ. ಸ್ಮಶಾನಗಳು ಮೃತದೇಹಗಳಿಂದ ತುಂಬಿ ಹೋಗಿವೆ ಎಂದು ವರದಿಯಾಗಿವೆ.

ಕೊರೊನಾ ವೈರಸ್‌ನಿಂದ ಉಂಟಾದ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದವರನ್ನು ಮಾತ್ರ ಕೋವಿಡ್ ಸಾವಿನ ಅಂಕಿಅಂಶಗಳ ಅಡಿಯಲ್ಲಿ ಎಣಿಸಲಾಗುತ್ತದೆ ಎಂದು ಬೀಜಿಂಗ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಓಮಿಕ್ರಾನ್ ಪ್ರಕರಣಗಳಲ್ಲಿ, ಹೆಚ್ಚಿನ ಸಾವುಗಳು ಕೋವಿಡ್ ನಂತರದ ಸಮಸ್ಯೆಗಳಿಂದ ಸಂಭವಿಸುತ್ತವೆ.

English summary
Covid outbreak in china: Health minister Mansukh Mandaviya will hold a review meeting with top officials and experts on Wednesday. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X