ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ದಾಖಲೆ: ಭಾರತದಲ್ಲಿ 125 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ

|
Google Oneindia Kannada News

ನವದೆಹಲಿ, ಡಿಸೆಂಬರ್ 2: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಡಿಸೆಂಬರ್ 2ರ ಮಧ್ಯಾಹ್ನ 2 ಗಂಟೆ ವೇಳೆಗೆ 1,25,37,82,269 ಡೋಸ್ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 321 ದಿನಗಳಾಗಿದ್ದು, ಗುರುವಾರ ಮಧ್ಯಾಹ್ನ 2 ಗಂಟೆ ವೇಳೆಗೆ 42,00,780 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

"ಭಾರತವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 125 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಿರುವುದಕ್ಕಾಗಿ ಅಭಿನಂದನೆಗಳು. ನಮ್ಮ ಮೊದಲ ಶ್ರೇಣಿಯ ಯೋಧರು ಹಾಗೂ ನಾಗರಿಕರ ಸಹಕಾರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ವಿಶ್ವದಲ್ಲಿ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿದೆ," ಎಂದು ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಕೂ ಮಾಡಿದ್ದಾರೆ.

ಕೊರೊನಾವೈರಸ್ ಲಸಿಕೆ ಪಡೆದರೆ ಓಮಿಕ್ರಾನ್ ಕೂಡಾ ಏನೂ ಮಾಡುವುದಿಲ್ಲ!ಕೊರೊನಾವೈರಸ್ ಲಸಿಕೆ ಪಡೆದರೆ ಓಮಿಕ್ರಾನ್ ಕೂಡಾ ಏನೂ ಮಾಡುವುದಿಲ್ಲ!

ಭಾರತದಲ್ಲಿ ಬುಧವಾರದ ಅಂಕಿ-ಅಂಶಗಳ ಪ್ರಕಾರ, ಒಂದೇ ದಿನ 80,35,261 ಡೋಸ್ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 124,86,09,652 ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಈ ಪೈಕಿ 79,09,99,901 ಜನರಿಗೆ ಮೊದಲ ಡೋಸ್ ಹಾಗೂ 45,76,09,751 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Covid Vaccination in India: 125 crore doses administered in India so far: Health Ministry

ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಯಾವ ಹಂತದವರಿಗೆ ಎಷ್ಟು ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,83,981 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 95,07,474 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,79,326 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,65,18,062 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 79,09,99,901 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 45,76,09,751 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 46,09,20,066 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 22,95,52,873 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 18,52,86,789 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 12,20,77,662 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಇನ್ನು 60 ವರ್ಷ ಮೇಲ್ಪಟ್ಟವರಲ್ಲಿ 11,60,29,739 ಡೋಸ್ ಮೊದಲ ಡೋಸ್ ಹಾಗೂ 7,99,53,680 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣದ ಬಗ್ಗೆ ತಿಳಿಯಿರಿ

2021ರ ಡಿಸೆಂಬರ್ 2ರ ಅಂಕಿ-ಅಂಶಗಳ ಪ್ರಕಾರ, 1,38,46,29,010 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ ಎಂಬುದನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

* ಪೂರೈಕೆಯಾದ ಲಸಿಕೆ ಪ್ರಮಾಣ - 1,38,46,29,010

* ಕೊವಿಡ್-19 ಲಸಿಕೆಯ ಲಭ್ಯತೆ - 22,78,95,731

English summary
Union Health Ministry said the cumulative number of Covid vaccine doses administered in the country crossed 125 crore on December 1, 2021. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X