ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಉಚಿತ

|
Google Oneindia Kannada News

ನವದೆಹಲಿ, ಮಾರ್ಚ್ 23: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ಆತಂಕ ಹೆಚ್ಚಾಗಿದೆ. ಕೊವಿಡ್-19 ಸೋಂಕಿನ ಹರಡುವಿಕೆ ವೇಗ ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಏಪ್ರಿಲ್ 1ರಿಂದ ದೇಶಾದ್ಯಂತ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುವುದು ಎಂದು ತಿಳಿದು ಬಂದಿದೆ. ಪ್ರಸ್ತುತ ಅಸ್ವಸ್ಥತೆಯನ್ನು ಹೊಂದಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು.

Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?

ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ, ಮೊದಲ ಶ್ರೇಣಿ ಕಾರ್ಮಿಕರು ಜೊತೆಗ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾವೈರಸ್ ಲಸಿಕೆಯನ್ನು ನೀಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು.

ಎರಡು ಮಾದರಿಯ ಕೊವಿಡ್-19 ಲಸಿಕೆ

ಎರಡು ಮಾದರಿಯ ಕೊವಿಡ್-19 ಲಸಿಕೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

19 ಲಕ್ಷಕ್ಕೂ ಹೆಚ್ಚು ಜನರಿಗೆ ಒಂದೇ ದಿನ ಕೊರೊನಾ ಲಸಿಕೆ

19 ಲಕ್ಷಕ್ಕೂ ಹೆಚ್ಚು ಜನರಿಗೆ ಒಂದೇ ದಿನ ಕೊರೊನಾ ಲಸಿಕೆ

ಭಾರತದಲ್ಲಿ ಒಂದು ದಿನ 19 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಸೋಮವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 19.65 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 40,976 - 44,728

ಮೊದಲ ಶ್ರೇಣಿ ಕಾರ್ಮಿಕರು - 72,153 - 1,65,797

45 ರಿಂದ 60 ವರ್ಷದೊಳಗಿನವರು - 3,34,367 - -

60 ವರ್ಷ ಮೇಲ್ಪಟ್ಟವರು - 13,07,614 - -

ಒಟ್ಟು ಕೊರೊನಾವೈರಸ್ ಲಸಿಕೆ - 17,55,110 - 2,10,525

66 ದಿನಗಳಲ್ಲಿ ಭಾರತದಲ್ಲಿ ಲಸಿಕೆ ಪಡೆದವರೆಷ್ಟು?

66 ದಿನಗಳಲ್ಲಿ ಭಾರತದಲ್ಲಿ ಲಸಿಕೆ ಪಡೆದವರೆಷ್ಟು?

ಭಾರತದಲ್ಲಿ 66 ದಿನಗಳಲ್ಲಿ 4,72,07,134 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 78,30,626 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 49,30,888 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 81,72,121 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 27,93,013 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4072747 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 1,94,07,739 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಂದೇ ದಿನ 40,715 ಮಂದಿಗೆ ಸೋಂಕು

ದೇಶದಲ್ಲಿ ಒಂದೇ ದಿನ 40,715 ಮಂದಿಗೆ ಸೋಂಕು

ಕೊರೊನಾವೈರಸ್ ಎರಡನೇ ಅಲೆಗೆ ಭಾರತಕ್ಕೆ ಭಾರತವೇ ತತ್ತರಿಸಿ ಹೋಗಿದೆ. ಒಂದೇ ದಿನದಲ್ಲಿ 40,715 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,16,86,796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 199 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,60,166ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,45,377 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Covid Vaccination To Be Opened From April 1 For ALL Citizens Above Age Of 45, Irrespective Of Co-morbidities. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X