ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಶೀಲ್ಡ್‌ ಡೋಸ್‌ಗಳ ನಡುವಿನ ಅಂತರ ಮತ್ತೆ ಕಡಿಮೆಯಾಗುವುದೇ?

|
Google Oneindia Kannada News

ನವದೆಹಲಿ, ಆಗಸ್ಟ್‌ 05: ಕೋವಿಶೀಲ್ಡ್‌ ಕೊರೊನಾ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಮತ್ತೆ ಕಡಿಮೆಗೊಳಿಸುವ ಸುಳಿವು ದೊರೆತಿದೆ.

ಆದರೆ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಎರಡು ಡೋಸ್‌ಗಳನ್ನು ಕಡಿಮೆ ಅಂತರದಲ್ಲಿ ನೀಡುವ ಕುರಿತು ಚರ್ಚೆ ನಡೆಯುತ್ತಿರುವುದಾಗಿ "ಮಿಂಟ್" ವರದಿ ಮಾಡಿದೆ. ಇನ್ನು ಎರಡು ಅಥವಾ ನಾಲ್ಕು ವಾರಗಳಲ್ಲಿ ಈ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳುವುದಾಗಿ ತಿಳಿದುಬಂದಿದೆ. ವೈಜ್ಞಾನಿಕ ಸಾಕ್ಷ್ಯಗಳ ಅಂತಿಮ ವರದಿ ನಂತರ ತೀರ್ಮಾನ ಕೈಗೊಳ್ಳುವುದಾಗಿ ಕೊರೊನಾ ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ. ಎನ್‌.ಕೆ. ಅರೋರಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡವರಿಗೆ ಕೋವಿಶೀಲ್ಡ್‌ ಲಸಿಕೆಯ 2 ಡೋಸ್ ಪರಿಣಾಮಕಾರಿಕೊರೊನಾದಿಂದ ಚೇತರಿಸಿಕೊಂಡವರಿಗೆ ಕೋವಿಶೀಲ್ಡ್‌ ಲಸಿಕೆಯ 2 ಡೋಸ್ ಪರಿಣಾಮಕಾರಿ

ಕೋವಿಶೀಲ್ಡ್‌ ಲಸಿಕೆಯನ್ನು ಸದ್ಯಕ್ಕೆ 18 ವರ್ಷ ಮೇಲ್ಪಟ್ಟವರಿಗೆ 12ರಿಂದ 16 ವಾರಗಳ ಅಂತರದಲ್ಲಿ ನೀಡಲಾಗುತ್ತಿದೆ. ಕೊರೊನಾ ಲಸಿಕೆ ಅಭಿಯಾನ ಆರಂಭವಾದ ಮೊದಲ ದಿನಗಳಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವು 4-6 ವಾರಗಳಾಗಿತ್ತು. ನಂತರ ಈ ಅಂತರವನ್ನು 4-8 ವಾರಗಳಿಗೆ ಏರಿಕೆ ಮಾಡಲಾಗಿತ್ತು. ಆನಂತರ ಅಂತಿಮವಾಗಿ 12-16 ವಾರಗಳ ಅಂತರದಲ್ಲಿ ಲಸಿಕೆ ನೀಡಲು ಆದೇಶಿಸಲಾಯಿತು.

Covishield Vaccine Doses Gap May Again Be Reduced

12-16 ವಾರಗಳ ಅಂತರದಲ್ಲಿ ಲಸಿಕೆ ನೀಡುವ ತೀರ್ಮಾನಕ್ಕೆ ಬಹಳಷ್ಟು ಟೀಕೆಗಳು ವ್ಯಕ್ತವಾದವು. ದೇಶದಲ್ಲಿನ ಕೊರೊನಾ ಲಸಿಕೆಯ ಅಭಾವದಿಂದಾಗಿ ಅಂತರವನ್ನು ಹೆಚ್ಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆದರೆ ಈ ನಿರ್ಧಾರವು ಅಂತರರಾಷ್ಟ್ರೀಯ ವೈಜ್ಞಾನಿಕ ಅಧ್ಯಯನಗಳ ಆಧಾರ ಬೆಂಬಲಿತವಾಗಿದೆ ಎಂದು ತಜ್ಞರು ವಾದಿಸಿದ್ದರು. ಎರಡು ಡೋಸ್‌ಗಳ ಲಸಿಕೆ ನಡುವೆ ಹೆಚ್ಚಿನ ಅಂತರವಿದ್ದರೆ ದೇಹದಲ್ಲಿ ಪ್ರತಿಕಾಯವು ಹೆಚ್ಚಿನ ಮಟ್ಟದಲ್ಲಿ ಸೃಷ್ಟಿಯಾಗಲು ಅನುಕೂಲವಾಗುತ್ತದೆ ಎಂಬುದನ್ನು ಸಾಕ್ಷೀಕರಿಸಿದರು.

ಲಸಿಕೆಯ ಮೊದಲ ಡೋಸ್ ಲಸಿಕೆ ಪಡೆದ ನಂತರ ದೇಹದಲ್ಲಿ ರೋಗನಿರೋಧಕ ಶಕ್ತಿಯ ಮಟ್ಟ ಹೆಚ್ಚಾಗಿರುವುದು ಕಂಡುಬಂದಿತ್ತು. ಹೀಗಾಗಿ ಮೊದಲ ಡೋಸ್ ಲಸಿಕೆ ದೇಹದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಮಯ ತೆಗೆದುಕೊಳ್ಳುತ್ತಿದ್ದು, ಎರಡನೇ ಡೋಸ್ ಲಸಿಕೆಯನ್ನು ತಡವಾಗಿ ನೀಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.

ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆಯ ಭಿನ್ನ ಡೋಸ್‌ಗಳ ಪ್ರಭಾವದ ಕುರಿತು ಅಧ್ಯಯನಗಳು ನಡೆಯುತ್ತಿವೆ. ಭಿನ್ನ ವಯೋಮಾನದವರಿಗೆ ಎರಡು ಡೋಸ್‌ಗಳ ನಡುವಿನ ಅಂತರದ ಕುರಿತು ಪ್ರಯೋಗಗಳು ನಡೆಯುತ್ತಿವೆ ಎಂದು ಎನ್‌.ಕೆ. ಅರೋರಾ ತಿಳಿಸಿದ್ದಾರೆ.

ಹಿರಿಯರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಅಧಿಕವಿರುವುದರಿಂದ 45-60 ವಯೋಮಾನದ ಗುಂಪಿಗೆ ಕೋವಿಶೀಲ್ಡ್‌ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಕುರಿತು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಸದ್ಯಕ್ಕೆ ಮೂರು ಕೊರೊನಾ ಲಸಿಕೆಗಳಿಗೆ ಅನುಮೋದನೆ ದೊರೆತಿದೆ. ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ಭಾರತದ ಸೆರಂ ಇನ್‌ಸ್ಟಿಟ್ಯೂಟ್ ಉತ್ಪಾದನೆ ಮಾಡುತ್ತಿದೆ. ಕೊರೊನಾ ಸೋಂಕಿನ ಮೇಲೆ ಕೋವಿಶೀಲ್ಡ್‌ ಲಸಿಕೆ ಪ್ರಭಾವದ ಕುರಿತು ಹಲವು ಅಧ್ಯಯನಗಳು ನಡೆದಿದ್ದು, ಈ ಲಸಿಕೆಯು ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಹಕಾರಿ ಎಂಬುದನ್ನು ಸಾಬೀತುಪಡಿಸಿವೆ.

Recommended Video

ಬೊಮ್ಮಾಯಿ ಸಂಪುಟದಿಂದ ವಿಜಯೇಂದ್ರ ಹೊರಗೆ | Oneindia Kannada

ಈ ಲಸಿಕೆಯು ಸೋಂಕಿನ ವಿರುದ್ಧ 93% ಪರಿಣಾಮಕಾರಿಯಾಗಿದ್ದು, ಸೋಂಕಿನಿಂದ ಸಂಭವಿಸುವ ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈಚೆಗೆ ನಡೆದ ಮತ್ತೊಂದು ಅಧ್ಯಯನದಲ್ಲಿ, ಕೊರೊನಾ ಸೋಂಕಿನಿಂದ ಗುಣಮುಖರಾಗಿ, ಕೋವಿಶೀಲ್ಡ್‌ ಲಸಿಕೆ ಎರಡೂ ಡೋಸ್ ಪಡೆದವರಲ್ಲಿ ಹೆಚ್ಚಿನ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದಾಗಿ ತಿಳಿದುಬಂದಿತ್ತು. ಕೋವಿಶೀಲ್ಡ್ ಲಸಿಕೆಯ ಒಂದು ಅಥವಾ ಎರಡು ಡೋಸ್‌ ಪಡೆದವರಿಗೆ ಹೋಲಿಸಿದರೆ, ಕೊರೊನಾದಿಂದ ಗುಣಮುಖರಾಗಿ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರಲ್ಲಿ ಅತಿ ಹೆಚ್ಚು ಪ್ರತಿಕಾಯ ಸೃಷ್ಟಿಯಾಗಿರುವುದು ಗೋಚರಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಹಾಗೂ ಸಾಂಕ್ರಾಮಿಕ ರೋಗಶಾಸ್ತ್ರದ ರಾಷ್ಟ್ರೀಯ ಸಂಸ್ಥೆಯ ಅಧ್ಯಯನ ತಿಳಿಸಿತ್ತು.

English summary
The covishield gap is likely to be reduced but this will not be applicable for all adults. The new schedule will be for people above the age of 45 years, Centre's expert has hinted, reports said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X