Vice President Election: ಉಪರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ
ಜಗದೀಪ್ ಧನಕರ್ ಅವರು ಆರೋಗ್ಯ ಕಾರಣದಿಂದ ತಮ್ಮ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನು ಇಲ್ಲಿವರೆಗೆ ಈ ರೇಸ್‌ನಲ್ಲಿ ಹಲವರಿದ್ದಾರೆ ಎಂದು ಅನೇಕರ ಹೆಸರುಗಳು ಸದ್ದು ಮಾಡುತ್ತಿತ್ತು. ಈ ಪೈಕಿ ಎನ್‌ಡಿಎ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿದೆ.
ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಕಣಕ್ಕಿಳಿದಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ.

ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಸಿಪಿ ರಾಧಾಕೃಷ್ಣನ್ ಜಿ ಅವರು ತಮ್ಮ ಸಮರ್ಪಣೆ ಮತ್ತು ಬುದ್ಧಿಶಕ್ತಿಯಿಂದ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಅವರು ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರೂ, ಅವರು ಯಾವಾಗಲೂ ಸಮುದಾಯ ಸೇವೆ ಮತ್ತು ಅಂಚಿನಲ್ಲಿರುವವರ ಸಬಲೀಕರಣದತ್ತ ಗಮನಹರಿಸಿದ್ದಾರೆ. ಅವರು ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಎನ್‌ಡಿಎ ಕುಟುಂಬವು ಅವರನ್ನು ನಮ್ಮ ಎನ್‌ಡಿಎ ಮೈತ್ರಿಕೂಟದ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಿದೆ ಎಂದು ನನಗೆ ಸಂತೋಷವಾಗಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
"ನಮ್ಮ ಪ್ರೀತಿಯ ಜನನಾಯಕ, ನಮ್ಮ ಅತ್ಯಂತ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನನ್ನನ್ನು ನಾಮನಿರ್ದೇಶನ ಮಾಡಿ ರಾಷ್ಟ್ರ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದು ರಾಧಾಕೃಷ್ಣನ್ ಟ್ವೀಟ್ ಮಾಡಿದ್ದಾರೆ.
ಸಿ.ಪಿ.ರಾಧಾಕೃಷ್ಣನ್ ಅವರು ವಿವಿಧ ರಾಜ್ಯಗಳ ಸಂಸದರಾಗಿ ಮತ್ತು ರಾಜ್ಯಪಾಲರಾಗಿ ಶ್ರೀಮಂತ ಅನುಭವ ಹೊಂದಿದ್ದಾರೆ. ಅವರ ಸಂಸದೀಯ ಕಾರ್ಯಗಳು ಯಾವಾಗಲೂ ಚುರುಕಾಗಿದ್ದವು. ಅವರು ಗವರ್ನರ್ ಆಗಿದ್ದಾಗ ಸಾಮಾನ್ಯ ನಾಗರಿಕರು ಎದುರಿಸುವ ಸವಾಲುಗಳನ್ನು ಪರಿಹರಿಸುವತ್ತ ಗಮನಹರಿಸಿದ್ದರು. ಈ ಅನುಭವಗಳು ಅವರಿಗೆ ಶಾಸಕಾಂಗ ಮತ್ತು ಸಾಂವಿಧಾನಿಕ ವಿಷಯಗಳ ಬಗ್ಗೆ ಅಪಾರ ಜ್ಞಾನವಿದೆ ಎಂದು ಖಚಿತಪಡಿಸಿತು. ಅವರು ಸ್ಪೂರ್ತಿದಾಯಕ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮೋದಿ ಹೇಳಿದ್ದಾರೆ.
ರಾಧಾಕೃಷ್ಣನ್ ಯಾರು?
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಪ್ರಸ್ತುತ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹಿಂದೆ ಫೆಬ್ರವರಿ 2023ರಿಂದ ಜುಲೈ 2024ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ನಂತರ ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ನಾಮನಿರ್ದೇಶನಗಳನ್ನು ಸಲ್ಲಿಸಲು ಕೊನೆಯ ಆಗಸ್ಟ್ 21 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆಗಸ್ಟ್ 25ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications