ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲೇ ಕ್ರೆಡಿಟ್, ಡೆಬಿಟ್ ಕಾರ್ಡ್ ಮಾಯ-ನೀತಿ ಆಯೋಗ ಸಿಇಒ

ಮುಂದಿನ ದಿನಗಳಲ್ಲಿ ಭಾರತದಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡುಗಳು ಮಾಯವಾಗಲಿವೆ. ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 2: ಮುಂದಿನ ದಿನಗಳಲ್ಲಿ ಭಾರತದಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡುಗಳು ಮಾಯವಾಗಲಿವೆ. ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

ಭಾರತ ತಂತ್ರಜ್ಞಾನದ ಅಳವಡಿಕೆಯಲ್ಲಿ ಭಾರೀ ವೇಗವನ್ನು ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗಲಿದೆ. ಮೊಬೈಲ್ ವ್ಯಾಲೆಟ್ ಮತ್ತು ಬಯೋಮೆಟ್ರಿಕ್ ಮೂಲಕ ವ್ಯವಹಾರಗಳು ನಡೆಯಲಿದ್ದು ಕ್ರೆಡಿಟ್, ಡೆಬಿಟ್ ಕಾರ್ಡ್ ಗಳು, ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ಅವರು ಹೇಳಿದ್ದಾರೆ. ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಜಾರಿ ನಿರ್ದೇಶನಾಲಯ ಭರ್ಜರಿ ಬೇಟೆ: 2300 ಬೇನಾಮಿ ಕಂಪನಿಗಳು ಪತ್ತೆ]

Credit, debit cards and also ATMs were set to disappear - Niti Aayog CEO

"ಸದ್ಯ ಭಾರತದಲ್ಲಿ ಬ್ಯಾಂಕ್ ಬ್ರಾಂಚ್ ನಲ್ಲಿ ನಡೆಯುವ ವ್ಯವಹಾರಗಳು ಸರಿಸುಮಾರು ಸತ್ತೇ ಹೋಗಿವೆ. ಜತೆಗೆ ತಂತ್ರಜ್ಞಾನಗಳನ್ನು ವೇಗವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೊಬೈಲ್ ವ್ಯಾಲೆಟ್ ಮತ್ತು ಬಯೋಮೆಟ್ರಿಕ್ ಮೂಲಕವೇ ವ್ಯವಹಾರಗಳು ನಡೆಯಲಿವೆ," ಎಂದು ಅಮಿತಾಬ್ ಕಾಂತ್ ಹೇಳಿದ್ದಾರೆ.[ರೈಲ್ವೇ ಆನ್ ಲೈನ್ ಬುಕಿಂಗ್ ಸೇವಾ ತೆರಿಗೆ ವಿನಾಯ್ತಿ ಮುಂದುವರಿಕೆ]

ಇದೇ ವೇಳೆ ಭಾರತದಲ್ಲಿ ಸಂಶೋಧನಾ ಕ್ಷೇತ್ರ ಭಾರೀ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಬೆಂಗಳೂರು ಹಾಗೂ ಹೈದರಾಬಾದಿನಲ್ಲಿ 1500ಕ್ಕೂ ಹೆಚ್ಚು ಕಂಪೆನಿಗಳು ತಮ್ಮ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ತೆರೆದಿವೆ ಕಾಂತ್ ಮಾಹಿತಿ ನೀಡಿದ್ದಾರೆ.

English summary
Niti Aayog CEO Amitabh Kant has said that in future digital transactions will be done through mobile wallets and biometric modes and credit and debit cards as also ATMs were set to disappear.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X